ಭಾರತದಲ್ಲಿ Redmi A4 5G ಲಾಂಚ್; ಬೆಲೆ 8,499 ರೂ.! ಇಲ್ಲಿವೆ ಟಾಪ್ 5 ಫೀಚರ್ಸ್
ಶಿಯೋಮಿ ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು, ರೆಡ್ಮಿ A4 5G (Redmi A4 5G launched in India) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕಂಪನಿಯು, ಇದನ್ನು ರೆಡ್ಮಿ A3 5G (Redmi A3 5G) ಫೋನಿನ ಉತ್ತರಾಧಿಕಾರಿಯಾಗಿ ಪರಿಚಯಿಸಿದೆ. ಇದರ ಬೆಲೆ ಕೇವಲ 8,499 ರೂ. ಆಗಿದೆ. ನೀವು, ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು. ಬನ್ನಿ, ಹೊಸ ರೆಡ್ಮಿ A4 5G ಮೊಬೈಲ್‌ನ ಟಾಪ್ 5 ವೈಶಿಷ್ಟ್ಯಗಳನ್ನು ತಿಳಿಯೋಣ.
ನೀವು, 10 ಸಾವಿರ ರೂ.ಗಳ ಬಜೆಟ್‌ನಲ್ಲಿ ಹೊಸ 5G ಫೋನ್ ಖರೀದಿಸಲು ಬಯಸಿದರೆ, ರೆಡ್ಮಿ A4 5G ಉತ್ತಮ ಆಯ್ಕೆಯಾಗಿದೆ. ಇದು ಕಡಿಮೆ ಬೆಲೆ ಹೊಂದಿದ್ದರೂ, ಕಂಪನಿಯು ವೈಶಿಷ್ಟ್ಯಗಳು ಹಾಗೂ ಕಾರ್ಯಕ್ಷಮತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಫೋನ್ 50 ಮೆಗಾಪಿಕ್ಸೆಲ್ ಎಐ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.88 ಇಂಚಿನ ಡಿಸ್ಪ್ಲೇ, 5160mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರೆಡ್ಮಿ A4 5G ಬೆಲೆ ಮತ್ತು ಲಭ್ಯತೆ
4GB + 64GB ಸ್ಟೋರೇಜ್ ಬೆಲೆ = 8,499 ರೂ.
4GB + 128GB ಸ್ಟೋರೇಜ್ ಬೆಲೆ = 9,499 ರೂ.
ಹೊಸ ರೆಡ್ಮಿ A4 5G ಫೋನ್ ಎರಡು ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ನೀವು, ಸ್ಪಾರ್ಕಲ್ ಪರ್ಪಲ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಬಣ್ಣದಲ್ಲಿ ಖರೀದಿಸಬಹುದು. ಈ ಫೋನಿನ 4GB+64GB ಸ್ಟೋರೇಜ್ ರೂಪಾಂತರವು 8,499 ರೂ.ಗೆ ಬಿಡುಗಡೆಯಾಗಿದೆ. 4GB+128GB ಸ್ಟೋರೇಜ್ ರೂಪಾಂತರದ ಬೆಲೆ 9,499 ರೂ. ಇದೆ. ಕಂಪನಿಯು ನವೆಂಬರ್ 27 ರಿಂದ ಈ ಫೋನನ್ನು ಮಾರಾಟ ಮಾಡಲಿದೆ. ಅಮೆಜಾನ್ ಮತ್ತು Mi ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಿರಲಿದೆ.
ರೆಡ್ಮಿ A4 5G: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರೆಡ್ಮಿ A4 5G ಫೋನಿನ ಟಾಪ್ 5 ವೈಶಿಷ್ಟ್ಯಗಳಲ್ಲಿ ಮೊದಲಿಗೆ ಡಿಸ್ಪ್ಲೇ ಬಗ್ಗೆ ತಿಳಿಯೋಣ. ಹೊಸ ರೆಡ್ಮಿ ಮೊಬೈಲ್ 6.88 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1640 X 720 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಒಳಗೊಂಡಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ರೆಡ್ಮಿ A4 5G ಫೋನಿನಲ್ಲಿ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್ ಅಳವಡಿಸಿದೆ. ಇದನ್ನು 4ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಫೋನಿನಲ್ಲಿ ಗ್ರಾಫಿಕ್ಸ್‌ಗಾಗಿ, ಅಡ್ರಿನೊ ಜಿಪಿಯು ಒದಗಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 4GB RAM+64GB ಮತ್ತು 128GB ಸ್ಟೋರೇಜ್ ಲಭ್ಯವಿದೆ. ಜೊತೆಗೆ 4GB ವರೆಗಿನ ವರ್ಚುವಲ್ RAM ಮತ್ತು ಸ್ಟೋರೇಜ್ ಅನ್ನು 1TB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ರೆಡ್ಮಿ A4 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಎಲ್ಇಡಿ ಫ್ಲ್ಯಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ದ್ವಿತೀಯ ಕ್ಯಾಮೆರಾ ಇದೆ. ಫೋನಿನಲ್ಲಿ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಹೊಸ ರೆಡ್ಮಿ A4 5G ಮೊಬೈಲ್ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಜೊತೆಗೆ 33W ಅಡಾಪ್ಟರ್ ಸಹ ಲಭ್ಯವಿದೆ.
ಇತರೆ ವೈಶಿಷ್ಟ್ಯಗಳು
ರೆಡ್ಮಿ A4 5G ಫೋನ್ ನೀರು ಮತ್ತು ದೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಪೋರ್ಟ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 5, ಬ್ಲೂಟೂತ್ 5, ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








