ಅಗ್ಗದ Redmi A4 5G ಫೋನ್ ಖರೀದಿಸುವ ಗ್ರಾಹಕರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್!
ಶಿಯೋಮಿ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ A4 5G (Redmi A4 5G) ಮೊಬೈಲ್ 5G ಸಪೋರ್ಟ್ ಪಡೆದಿರುವ ಕಡಿಮೆ ಬೆಲೆಯ ಫೋನ್‌ಗಳಲ್ಲಿ ಒಂದಾಗಿದೆ. ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 4 ಜನ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದ್ದು, ಬಿಗ್ ಬ್ಯಾಟರಿ ಸಹ ಪಡೆದಿದೆ. ಅದಾಗ್ಯೂ, ಈ ಫೋನಿನಲ್ಲಿ ಈ ಒಂದು ಪ್ರಾಬ್ಲಂ ಇದೆ. ಅರೇ..ಅದೇನು ಅಂತೀರಾ?
ಹೌದು, ಇತ್ತೀಚಿಗೆ ಮಾರುಕಟ್ಟೆ ಪ್ರವೇಶಿಸಿರುವ ರೆಡ್ಮಿ A4 5G ( Redmi A4 5G ) ಎಂಟ್ರಿ ಲೆವೆಲ್ ವಿಭಾಗದಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಬೇಡಿಕೆಯಲ್ಲಿ ಕಾಣಿಸಿಕೊಂಡಿದೆ. ಆದರೆ ಈ ಫೋನ್ ಏರ್‌ಟೆಲ್‌ನ 5G ನೆಟ್‌ವರ್ಕ್‌ನೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲ. ಈ ಹೊಸ ಫೋನ್ ಕೇವಲ SA (ಸ್ವತಂತ್ರ) 5G ನೆಟ್‌ವರ್ಕ್‌ಗಳನ್ನು ಬೆಂಬಲಿಸಲು ನಿರ್ಮಿಸಲಾಗಿದೆ. ಆದರೆ ಏರ್‌ಟೆಲ್ ತನ್ನ ಸೇವೆಗಳಿಗಾಗಿ NSA (ಸ್ವತಂತ್ರವಲ್ಲದ) 5G ತಂತ್ರಜ್ಞಾನವನ್ನು ಬಳಕೆ ಮಾಡುತ್ತದೆ.

ಹೀಗಾಗಿ ರೆಡ್ಮಿ A4 5G (Redmi A4 5G) ಫೋನಿನಲ್ಲಿ 5G ಸ್ಪೀಡ್ ಅನ್ನು ಬಳಕೆ ಮಾಡಲು ಬಳಕೆದಾರರಿಗೆ ಸಾಧ್ಯವಾಗುವುದಿಲ್ಲ ಎನ್ನಲಾಗಿದೆ. ಆದರೆ ಬಳಕೆದಾರರು ಈ ಫೋನಿನಲ್ಲಿ ಏರ್‌ಟೆಲ್‌ನ 4G ನೆಟ್‌ವರ್ಕ್ ಅನ್ನು ಬಳಸುವುದಕ್ಕೆ ಯಾವುದೇ ಅಡೆ ತಡೆ ಇರುವುದಿಲ್ಲ. ಅಲ್ಲದೇ ಜಿಯೋ 5G ನೆಟ್‌ವರ್ಕ್ ಅನ್ನು ಬಳಕೆ ಮಾಡಲು ಪೂರಕವಾಗಿದೆ. ಹಾಗಾದರೇ ರೆಡ್ಮಿ A4 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಹೇಗೆ
ರೆಡ್ಮಿ A4 5G ಫೋನ್ 6.52 ಇಂಚಿನ HD+ ಡಿಸ್‌ಪ್ಲೇ ಜೊತೆಗೆ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸೌಲಭ್ಯವನ್ನು ಸಪೋರ್ಟ್ ಮಾಡಲಿದೆ. ಇದು ಗೇಮಿಂಗ್ ಮತ್ತು ವೀಡಿಯೊ ಪ್ಲೇಬ್ಯಾಕ್ಗಾಗಿ ಸುಗಮ ದೃಶ್ಯಗಳನ್ನು ಒದಗಿಸುತ್ತದೆ.
ಯಾವ ಪ್ರೊಸೆಸರ್ ಪವರ್ ಇದೆ
ರೆಡ್ಮಿ A4 5G ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4s Gen 2 (Snapdragon 4s Gen 2) ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಹಾಗೆಯೇ ಇದು 4GB RAM + 64GB ಹಾಗೂ 4GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಕ್ಯಾಮೆರಾ ಸೆನ್ಸಾರ್ ಕಮಾಲ್
ರೆಡ್ಮಿ A4 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ ಸೆಲ್ಫಿಗಾಗಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸಲ್ ಸೆನ್ಸಾರ್‌ನ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟು
ರೆಡ್ಮಿ A4 5G ಫೋನ್ 5,160 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಅನುಗುಣವಾಗಿ 33w ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಫೋನ್ ಬ್ಲೂಟೂತ್, ವೈ ಫೈ, NAVIC, 3.5mm ಆಡಿಯೋ ಜ್ಯಾಕ್ ಸೌಲಭ್ಯಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಪರ್ಪಲ್ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ.


Click it and Unblock the Notifications








