Just In
- 55 min ago ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- 1 hr ago Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- 16 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- 17 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
Don't Miss
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರೆಡ್ಮಿ ಕೆ20' ಸರಣಿ ಸ್ಮಾರ್ಟ್ಫೋನ್ಗಳ ಖರೀದಿಗೆ ಸಿಹಿಸುದ್ದಿ!
ಶಿಯೋಮಿಯ ಉಪ ಬ್ರಾಂಡ್ ರೆಡ್ಮಿ ತನ್ನ ಮೊದಲ ಪ್ರಮುಖ ಫ್ಲಾಗ್ಶಿಪ್ ಸ್ಮಾರ್ಟ್ಫೋನ್ಗಳಾದ ರೆಡ್ಮಿ ಕೆ 20 ಪ್ರೊ ಮತ್ತು ರೆಡ್ಮಿ ಕೆ 20 ಫೋನ್ಗಳನ್ನು ಆಫ್ಲೈನ್ ಮಾರಾಟಕ್ಕೆ ತಂದಿದೆ. ಇದೇ ಆಗಸ್ಟ್ 5 ರಿಂದ ಈ ಎರಡು ಸ್ಮಾರ್ಟ್ಫೋನ್ಗಳು ಆನ್ಲೈನ್ ಮತ್ತು ಆಫ್ಲೈನ್ ಮಳಿಗೆಗಳಿಂದ ಮುಕ್ತ ಮಾರಾಟದಲ್ಲಿ ಲಭ್ಯವಿದೆ ಎಂದು ಕಂಪೆನಿ ಅಧಿಕೃತವಾಗಿ ತಿಳಿಸಿದೆ.
ಆಫ್ಲೈನ್ ಮಾರಾಟದಲ್ಲೂ ಸಹ ರೆಡ್ಮಿ ಕೆ 20 ಮತ್ತು ರೆಡ್ಮಿ ಕೆ 20 ಪ್ರೊ ಸ್ಮಾರ್ಟ್ಫೋನ್ಗಳ ಮೇಲೆ ಕ್ಯಾಶ್ಬ್ಯಾಕ್ ಆಫರ್ ನೀಡಿಲಾಗಿದ್ದು, ಐಸಿಐಸಿಐ ಬ್ಯಾಂಕ್ ಗ್ರಾಹಕರು ಫ್ಲಿಪ್ಕಾರ್ಟ್ ತಾಣದಲ್ಲಿ ಸ್ಮಾರ್ಟ್ಫೋನ್ಗಳನ್ನು ಖರೀದಿಸಿದರೆ 1,000ರೂ. ಕ್ಯಾಶ್ಬ್ಯಾಕ್ ಲಭ್ಯವಿದೆ. ಐಸಿಐಸಿಐ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಸಿಯೂ ಈ ಆಫರ್ ಅನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನು ರೆಡ್ಮಿ ಕೆ 20 ಮತ್ತು ರೆಡ್ಮಿ ಕೆ 20 ಪ್ರೊ ಎರಡೂ ಫೋನ್ಗಳು ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಹೊಂದಿರುವ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳಾಗಿದ್ದು, ಬೆಲೆಯಲ್ಲಿ ಒನ್ಪ್ಲಸ್ 7 ಕಿಲ್ಲರ್ ಪೋನ್ಗಳು ಎನಿಸಿಕೊಂಡಿವೆ. ಹಾಗಾದರೆ, ರೆಡ್ಮಿ ಕೆ20 ಮತ್ತು ಕೆ20 ಪ್ರೊ ಸ್ಮಾರ್ಟ್ಪೋನ್ಗಳು ಹೇಗಿವೆ ಎಂಬುದನ್ನು ಮುಂದಿನ ಸ್ಲೈಡರ್ಗಳಲ್ಲಿ ಓದಿ ತಿಳಿಯಿರಿ.
ಡಿಸ್ಪ್ಲೇ
ರೆಡ್ಮಿ ಕೆ20 ಪ್ರೊ ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್ಗಳ ಎಫ್ಹೆಚ್ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.
ರೆಡ್ಮಿ ಕೆ20 ಫೋನ್ ಕೂಡ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್ಗಳ ಎಫ್ಹೆಚ್ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.
ಪ್ರೊಸೆಸರ್
ರೆಡ್ಮಿ ಕೆ20 ಪ್ರೊ ರೂ ಸ್ಮಾರ್ಟ್ಫೋನ್ 8GB RAM ನೊಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.
ರೆಡ್ಮಿ ಕೆ20 ಫೋನ್ 6GB RAM ನೊಂದಿಗೆ ಆಕ್ಟಾಕೋರ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 730 ಪ್ರೊಸೆಸರ್ ಹೊಂದಿ. ಪ್ರೊಸೆಸರ್ 6 ಕೋರ್ ಕ್ಲಾಕ್ಡ್1.8 ಗಿಗಾಹರ್ಡ್ಜ ವೇಗವನ್ನು ಪಡೆದಿದೆ. ಪ್ರೊಸೆಸರ್ನಲ್ಲಿ 8nm ತಂತ್ರಾಜ್ಞಾನವಿದ್ದು, ಇದು ಬ್ಯಾಟರಿ ಉಳಿಕೆ ಮತ್ತು ಮಲ್ಟಿಟಾಸ್ಕ್ಗೆ ನೆರವಾಗಲಿದೆ. ಇನ್ನು 64GB ಮತ್ತು 128GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ.
ರಿಯರ್ ಕ್ಯಾಮೆರಾ
ರೆಡ್ಮಿ ಕೆ 20 ಪ್ರೊ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಪ್ರಾಥಮಿಕ ಸಂವೇದಕದೊಂದಿಗೆ ಎಫ್ / 1.75 ಲೆನ್ಸ್, 13 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್ ಮತ್ತು ಎಫ್ / 2.4 ನೊಂದಿಗೆ 8 ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಹೊಂದಿದೆ.
ರೆಡ್ಮಿ ಕೆ20 ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಪ್ರಾಥಮಿಕ ಸಂವೇದಕದೊಂದಿಗೆ ಎಫ್ / 1.75 ಲೆನ್ಸ್, 13 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್ ಮತ್ತು ಎಫ್ / 2.4 ನೊಂದಿಗೆ 8 ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಹೊಂದಿದೆ.
ಸೆಲ್ಫಿ ಕ್ಯಾಮೆರಾ!
ರೆಡ್ಮಿ ಕೆ 20 ಪ್ರೊ ಫೋನ್ನಲ್ಲಿ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದ್ದು, ಈ ಕ್ಯಾಮೆರಾವು ಪಾಪ್ಅಪ್ ಮಾದರಿಯಲ್ಲಿದೆ. ಎಲಿಗಂಟ್ ಪನೋರಮಾ ಸೆಲ್ಫಿ ಫೋಟೊ ಸೆರೆಹಿಡಿಯಬಹುದಾಗಿದ್ದು, ಪಾಪ್ಅಪ್ ಕ್ಯಾಮೆರಾಗೆ ದಕ್ಕೆಗಳಿಂದ ರಕ್ಷಣೆಯ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಪೋಟೊ ಎಡಿಟಿಂಗ್, ಫಿಲ್ಟರ್, ಆಯ್ಕೆಗಳು ಸೇರಿಕೊಂಡಿವೆ.
ರೆಡ್ಮಿ ಕೆ20 ಫೋನ್ನಲ್ಲೂ ಕೂಡ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಈ ಕ್ಯಾಮೆರಾವು ಪಾಪ್ಅಪ್ ಮಾದರಿಯಲ್ಲಿದೆ. ಎಲಿಗಂಟ್ ಪನೋರಮಾ ಸೆಲ್ಫಿ ಫೋಟೊ ಸೆರೆಹಿಡಿಯಬಹುದಾಗಿದ್ದು, ಪಾಪ್ಅಪ್ ಕ್ಯಾಮೆರಾಗೆದಕ್ಕೆಗಳಿಂದ ರಕ್ಷಣೆಯ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಪೋಟೊ ಎಡಿಟಿಂಗ್, ಫಿಲ್ಟರ್, ಆಯ್ಕೆಗಳು ಸೇರಿಕೊಂಡಿವೆ.
4,000mAh ಬ್ಯಾಟರಿ ಶಕ್ತಿ
ರೆಡ್ಮಿ ಕೆ20 ಪ್ರೊ ಸ್ಮಾರ್ಟ್ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.
ರೆಡ್ಮಿ ಕೆ20 ಸ್ಮಾರ್ಟ್ಫೋನ್ ಕೂಡ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಆದರೆ ಈ ಡಿವೈಸ್ 18W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ಸಹ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.
ಇತರೆ ಎಲ್ಲಾ ಫೀಚರ್ಸ್
ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.
ರೆಡ್ಮಿ ಕೆ20 ಪ್ರೊ ಫೋನಿನಲ್ಲೂ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.
ಒಟ್ಟಾರೆ ವ್ಯತ್ಯಾಸಗಳು!
ರೆಡ್ಮಿ ಕೆ20 ಮತ್ತು ರೆಡ್ಮಿ ಕೆ20 ಪ್ರೊ ಎರಡು ಫೋನ್ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಯಾಂತ್ರಿಕೃತ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಫೋನ್ಗಳು AMOLED ಸ್ಕ್ರೀನ್, ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು 4,000mAh ದೊಡ್ಡ ಬ್ಯಾಟರಿಯಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತವೆ. ಆದಾಗ್ಯೂ, ಎರಡು ಫೋನ್ಗಳ ನಡುವೆ ಕೆಲವು ಪ್ರಮುಖ ವ್ಯತ್ಯಾಸಗಳಿವೆ.
ವಿಶೇಷವೆಂದರೆ, ಕೆ 20 ಪ್ರೊ ಪ್ರೀಮಿಯಂ ಸ್ನಾಪ್ಡ್ರಾಗನ್ 855 ಪ್ರೊಸೆಸರ್ ನಿಂದ ಚಾಲಿತವಾಗಿದ್ದರೆ, ಕೆ 20 ಸ್ನಾಪ್ಡ್ರಾಗನ್ 730 ಪ್ರೊಸೆಸರ್ ನಿಂದ ನಿಯಂತ್ರಿಸಲ್ಪಡುತ್ತದೆ. ರೆಡ್ಮಿ ಕೆ 20 ಪ್ರೊ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಿದರೆ, ರೆಡ್ಮಿ ಕೆ20 18W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ. ಎರಡೂ ಸ್ಮಾರ್ಟ್ಫೋನ್ಗಳ ಬೆಲೆಗಳನ್ನು ಈ ಮೂರು ವ್ಯತ್ಯಾಸಗಳು ನಿರ್ಧರಿಸಿವೆ. ಒಟ್ಟಿನಲ್ಲಿ ನಾವು ನೀಡುವ ಹಣಕ್ಕೆ ಎರಡೂ ಫೋನ್ಗಳು ಕೂಡ ಬೆಸ್ಟ್ ಆಯ್ಕೆ ಎಂದು ಹೇಳಬಹುದು.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999