ಶಿಯೋಮಿ ರೆಡ್ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಶಿಯೋಮಿ ಕಂಪನಿಯ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳಲ್ಲೊಂದಾದ ರೆಡ್ಮಿ ಕೆ20 ಪ್ರೊ ಹೈ ಎಂಡ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಒಮ್ಮೆ ಬೆಲೆ ಕಡಿತ ಕಂಡಿದ್ದು, ಆದ್ರೆ ಇದೀಗ ಮತ್ತೊಮ್ಮೆ ಭಾರಿ ಬೆಲೆ ಇಳಿಕೆ ಆಗಿದೆ. ಕ್ಯಾಮೆರಾವು 48ಎಂಪಿ ಸೆನ್ಸಾರ್ ಹಾಗೂ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಫೀಚರ್ಸ್ ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಶಿಯೋಮಿ ಸಂಸ್ಥೆಯ ರೆಡ್ಮಿ ಕೆ20 ಪ್ರೊ 6GB + 128GB ವೇರಿಯಂಟ್ ಫೋನ್ ಬೆಲೆಯಲ್ಲಿ ಈಗ ತಾತ್ಕಾಲಿಕ 4,000ರೂ ಬೆಲೆ ಇಳಿಕೆ ಆಗಿದೆ. ಈ ಫೋನ್ ಸದ್ಯ 22,999ರೂ.ಗಳಿಗೆ ಲಭ್ಯ. ಇನ್ನು ಈ ಡಿಸ್ಕೌಂಟ್ ದರವು ಇದೇ ಆಗಷ್ಟ್ 31ರ ವರೆಗೂ ಇರಲಿದ್ದು, ಅಮೆಜಾನ್, ಫ್ಲಿಪ್‌ಕಾರ್ಟ್ ಮಿ.ಸ್ಟೋರ್ ಹಾಗೂ ಪ್ರಮುಖ ರೀಟೇಲ್ ಸ್ಟೋರ್‌ಗಳಲ್ಲಿಯೂ ಲಭ್ಯವಾಗಲಿದೆ. ಹಾಗಾದರೆ ರೆಡ್ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ಹೇಗಿದೆ
ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಪ್ರೊಸೆಸರ್ ಕಾರ್ಯ
ರೆಡ್‌ಮಿ ಕೆ20 ಪ್ರೊ ರೂಪಾಂತದ ಸ್ಮಾರ್ಟ್‌ಫೋನ್ 8GB RAM ನೋಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

ಕ್ಯಾಮೆರಾ ಸ್ಪೆಷಲ್
ರೆಡ್‌ಮಿ ಕೆ20 ಪ್ರೊ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮೊದಲ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದ್ದು, ತೃತೀಯ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಲೈಫ್
ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.


Click it and Unblock the Notifications








