Home
ಸುದ್ದಿಜಾಲ

ಶಿಯೋಮಿ 'ರೆಡ್ಮಿ ಕೆ20 ಪ್ರೊ' ಫೋನ್ ಬೆಲೆಯಲ್ಲಿ ಭಾರಿ ಇಳಿಕೆ!

ಇತ್ತೀಚಿಗೆ ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಶಿಯೋಮಿಯ ಕೆಲವು ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. ಆ ಪೈಕಿ ರೆಡ್ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ ಒಂದಾಗಿದೆ. ಹೈ ಎಂಡ್ ಫೀಚರ್ಸ್‌ಗಳನ್ನು ಒಳಗೊಂಡಿರುವ ಶಿಯೋಮಿಯ ರೆಡ್ಮಿ ಕೆ20 ಮತ್ತು ರೆಡ್ಮಿ ಕೆ20 ಪ್ರೊ ಫೋನ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಅವುಗಳಲ್ಲಿ ಈಗ ದೈತ್ಯ ಫೀಚರ್ಸ್‌ಗಳ ರೆಡ್ಮಿ ಕೆ20 ಪ್ರೊ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ.

ಶಿಯೋಮಿ ಸಂಸ್ಥೆ

ಹೌದು, ಶಿಯೋಮಿ ಸಂಸ್ಥೆಯ ರೆಡ್ಮಿ ಕೆ20 ಪ್ರೊ ಫೋನ್ ಬೆಲೆಯಲ್ಲಿ ಶಾಶ್ವತ ಇಳಿಕೆ ಆಗಿದೆ. ಈ ಫೋನ್ ಸೋನಿಯ IMX586 ಲೆನ್ಸ್‌ ಸಾಮರ್ಥ್ಯದ 48ಎಂಪಿ ಸೆನ್ಸಾರ್‌ ಮುಖ್ಯ ಕ್ಯಾಮೆರಾವು ಹೊಂದಿದ್ದು, ಮುಂಬದಿಯಲ್ಲಿ 2೦ ಎಂಪಿ ಸೆಲ್ಫಿ ಕ್ಯಾಮೆರಾ ಹೊಂದಿದೆ. ಬೆಲೆ ಕಡಿತದ ನಂತರ ಈಗ 6GB RAM ವೇರಿಯಂಟ್ ಫೋನ್ ಬೆಲೆಯು 24,999ರೂ ಆಗಿದೆ. ಹಾಗೂ 8GB RAM ವೇರಿಯಂಟ್ ಫೋನ್ ಬೆಲೆಯು 27,999ರೂ. ಆಗಿದೆ. ಹಾಗಾದರೆ ರೆಡ್ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ರೆಡ್‌ಮಿ ಕೆ20 ಪ್ರೊ ರೂಪಾಂತದ ಸ್ಮಾರ್ಟ್‌ಫೋನ್ 8GB RAM ನೋಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ರೆಡ್‌ಮಿ ಕೆ20 ಪ್ರೊ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮೊದಲ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದ್ದು, ತೃತೀಯ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ಇತರೆ ಫೀಚರ್ಸ್

ಇತರೆ ಫೀಚರ್ಸ್

ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೊಡಬಹುದು.

Best Mobiles in India

English summary
The Redmi K20 Pro has received a permanent price cut and will now be available at a starting price of Rs 24,999. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+