ರೆಡ್ಮಿ K30 5G ರೇಸಿಂಗ್ ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ತಯಾರಕ ಶಿಯೋಮಿಯ ರೆಡ್‌ಮಿ ಬ್ರ್ಯಾಂಡ್‌ನಿಂದ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಾಗಿದೆ. ಈಗಾಗಲೇ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಇದಲ್ಲದೆ ಹಲವು ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಶಿಯೋಮಿ ರೆಡ್‌ಮಿ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಇನ್ನು ಈಗಾಗಲೇ ರೆಡ್‌ಮಿ ಬ್ರ್ಯಾಂಡ್‌ನಲ್ಲಿ ರೆಡ್‌ಮಿ K30 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಾಗಿತ್ತು. ಆದರೇ ಇದೀಗ ರೆಡ್‌ಮಿ K30 5G ಸ್ಮಾರ್ಟ್‌ಫೋನ್ ರೇಸಿಂಗ್ ಆವೃತ್ತಿಯನ್ನ ಬಿಡುಗಡೆ ಮಾಡಲಾಗಿದೆ.

ಹೌದು, ಶಿಯೋಮಿಯ ಸಬ್‌ಬ್ರ್ಯಾಂಡ್ ರೆಡ್‌ಮಿ ರೆಡ್ಮಿ K30 5G ಎಕ್ಸ್ಟ್ರೀಮ್ ಎಡಿಷನ್ ರೆಡ್ಮಿK30 5G ಸ್ಪೀಡ್ ಎಡಿಶನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ರೆಡ್ಮಿ K30 ಸರಣಿಯ ಸ್ಮಾರ್ಟ್‌ಫೋನ್‌ಗಳಿಗೆ ಹೊಸದಾಗೆ ಸೇರ್ಪಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಫೋನ್ ಹೊಸ ಸ್ನಾಪ್‌ಡ್ರಾಗನ್ 768G SoC ಪ್ರೊಸೆಸರ್ ಅನ್ನು ಹೊಂದಿದ್ದು, ಈ ಪ್ರೊಸೆಸರ್ ಹೊಂದಿರುವ ಈ ಸರಣಿಯ ಮೊದಲ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ರೆಡ್ಮಿ K30 5G ರೇಸಿಂಗ್ ಆವೃತ್ತಿಯು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ರೆಡ್‌ಮಿ K30 5G ರೇಸಿಂಗ್ ಆವೃತ್ತಿಯ ಸ್ಮಾರ್ಟ್‌ಫೋನ್ 6.67-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು ಗೇಮಿಂಗ್ ಹಾಗೂ ವೀಡಿಯೋ ವೀಕ್ಷಣೆಗೆ ಅನುಕೂಲವಾಗುವ ಡಿಸ್‌ಪ್ಲೇ ಮಾಸದರಿಯನ್ನ ಒಳಗೊಂಡಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ನವೀಕರಿಸಿದ ಅಡ್ರಿನೊ 620 ಜಿಪಿಯುಅನ್ನು ಒಳಗೊಂಡಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೊರೇಜ್ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ರೆಡ್ಮಿ K30 5G ರೇಸಿಂಗ್ ಆವೃತ್ತಿಯು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿರುವ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ವೈ-ಫೈ, 4G LTE , ಬ್ಲೂಟೂತ್, NFC, 3.5mm ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ K30 5G ರೇಸಿಂಗ್ ಆವೃತ್ತಿಯ ಸ್ಮಾರ್ಟ್‌ಫೋನ್ ಜೆಡಿ.ಕಾಂನಲ್ಲಿ CNY 1,999 (ಸರಿಸುಮಾರು 21,300 ರೂ.) ಬೆಲೆಯನ್ನ ಹೊಂದಿದೆ.ಇನ್ನು ಈ ಫೋನ್ ಇದೇ ಮೇ 14 ರಂದು ಮಾರಾಟ ವಾಗಲಿದೆ. ಡೀಪ್ ಸೀ ಶಿಮ್ಮರ್, ಮಿಂಟ್ ಐಸ್ ಬ್ಲೂ, ಪರ್ಪಲ್ ಜೇಡ್ ಫ್ಯಾಕ್ಟರಿ, ಮತ್ತು ಟೈಮ್ ಮೊನೊಲಾಗ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications




