ಶಿಯೋಮಿಯ 'ರೆಡ್ಮಿ ಕೆ30 ಪ್ರೊ 5G' ಸ್ಮಾರ್ಟ್‌ಫೋನ್ ಲಾಂಚ್!

|

ಚೀನಾ ಮೂಲದ ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಕೆ20 ಪ್ರೊ ಮತ್ತು ರೆಡ್ಮಿ ಕೆ30 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಸಖತ್ ಹವಾ ಮಾಡಿತ್ತು. ಇದರ ಬೆನ್ನಲ್ಲೇ ಈಗ ತನ್ನ ಬಹುನಿರೀಕ್ಷಿತ ರೆಡ್ಮಿ ಕೆ30 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. 5G ಕೆಟಗೇರಿಯಲ್ಲಿ ಈ ಸ್ಮಾರ್ಟ್‌ಫೋನ್ ಹೊಸ ಸಂಚಲನ ಮೂಡಿಸುವ ಲಕ್ಷಣಗಳನ್ನು ಹೊರಹಾಕಿದೆ.

ರೆಡ್ಮಿ ಕೆ30 ಪ್ರೊ 5G

ಹೌದು, ಶಿಯೋಮಿ ಇದೀಗ ರೆಡ್ಮಿ ಕೆ30 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಸ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್, ಆಂಡ್ರಾಯ್ಡ್ 10 ಓಎಸ್‌, 64 ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಜೊತೆಗೆ 5G ನೆಟವರ್ಕ್‌ ಸಪೋರ್ಟ್‌ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆಯುವ ಸೂಚನೆಯನ್ನು ನೀಡಿದೆ. ಇನ್ನು ಈ ಫೋನ್ 6GB RAM ಮತ್ತು 8GB RAM ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರೆಡ್ಮಿ ಕೆ30 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, HDR10+ ಸಪೋರ್ಟ್‌ ಪಡೆದಿದೆ. ಈ ಫೋನಿನ ಟಚ್ ಸ್ಯಾಂಪ್ಲಿಂಗ್ ರೇಟ್ 180Hz ಆಗಿದ್ದು, ಡಿಸ್‌ಪ್ಲೇಯ ಪ್ರಖರತೆಯು 1200nits ಸಾಮರ್ಥ್ಯದಲ್ಲಿದೆ. ಹಾಗೆಯೇ ಸ್ಕ್ರೀನ್‌ ಟು ಬಾಡಿ ನಡುವಿನ ಅಂತರವು 92.7 ಪರ್ಸೆಂಟ್ ಆಗಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ರೆಡ್ಮಿ ಕೆ30 ಪ್ರೊ ಸ್ಮಾರ್ಟ್‌ಫೋನ್ ಸ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಬೆಂಬಲ ಪಡೆದಿದೆ. ಈ ಫೋನ್ ಎರಡು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಅವು ಕ್ರಮವಾಗಿ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಹೊಂದಿವೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ರೆಡ್ಮಿ ಕೆ30 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಹೊಂದಿದ್ದು, ತೃತೀಯ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ನಾಲ್ಕನೇಯ ಕ್ಯಾಮೆರಾವು 5ಎಂಪಿ ಸೆನ್ಸಾರ್‌ನಲ್ಲಿದೆ ಹಾಗೂ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಒದಗಿಸಲಾಗಿದೆ.

ಬ್ಯಾಟರಿ ಲೈಫ್‌

ಬ್ಯಾಟರಿ ಲೈಫ್‌

ರೆಡ್ಮಿ ಕೆ30 ಪ್ರೊ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಇದೆ. ಡ್ಯುಯಲ್-ಮೋಡ್ 5 ಜಿ, ವೈ-ಫೈ 6, ಬ್ಲೂಟೂತ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಇತ್ತೀಚಿನ ಅಪ್‌ಡೇಟ್ ಫೀಚರ್ಸ್‌ಗಳು ಸಹ ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ಕೆ30 ಪ್ರೊ ಸ್ಮಾರ್ಟ್‌ಫೋನ್ ಚೀನಾದಲ್ಲಿ ಬಿಡುಗಡೆ ಆಗಿದ್ದು, ಸದ್ಯದಲ್ಲಿ ಭಾರತಕ್ಕೂ ಲಾಂಚ್ ಮಾಡಲಿದೆ. ರೆಡ್ಮಿ ಕೆ30 ಪ್ರೊ 5G ವೇರಿಯಂಟ್‌ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು ಚೀನಾದಲ್ಲಿ CNY 2,999 ಆಗಿದೆ. ಭಾರತದಲ್ಲಿ ಅಂದಾಜು 32,300ರೂ. ಆಗಿರಲಿದೆ. ಮೂನ್‌ಲೈಟ್ ವೈಟ್, ಸ್ಕೈ ಬ್ಲೂ, ಪರ್ಪಲ್ ಮತ್ತು ಸ್ಪೆಸ್‌ ಗ್ರೇ ಬಣ್ಣಗಳ ಆಯ್ಕೆ ಪಡೆದಿದೆ.

Most Read Articles
Best Mobiles in India

English summary
Redmi K30 Pro 5G price starts from CNY 2,999, which is around Rs 32,300 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X