ಗ್ರಾಹಕರ ನಿರೀಕ್ಷೆಗಳನ್ನು ಹೆಚ್ಚಿಸಿರುವ 'ರೆಡ್ಮಿ ಕೆ30 ಪ್ರೊ' ಬಿಡುಗಡೆಗೆ ಸಜ್ಜು!
ಚೀನಾ ಮೂಲದ ಶಿಯೋಮಿ ಈಗಾಗಲೇ ಹಲವು ಭಿನ್ನ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಇತ್ತೀಚಿಗಷ್ಟೆ ಫ್ಲ್ಯಾಗ್‌ಶಿಪ್ ಮಾದರಿಯ ರೆಡ್ಮಿ ಕೆ20 ಸರಣಿಯನ್ನು ಲಾಂಚ್ ಮಾಡಿ ಮಾರುಕಟ್ಟೆಯಲ್ಲಿ ಸೌಂಡ್ ಹೊರಹಾಕಿದೆ. ಹಾಗೂ ಕಳೆದ ಡಿಸೆಂಬರ್‌ನಲ್ಲಿ ರೆಡ್ಮಿ ಕೆ30 ಪರಿಚಯಿಸಿದ್ದು, ಅದರ ಬೆನ್ನಲ್ಲೇ ಈಗ ಹೊಸದಾಗಿ ರೆಡ್ಮಿ ಕೆ30 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜಾಗಿದ್ದು, ಈ ಫೋನ್ ಹಲವು ಅಚ್ಚರಿಯ ಫೀಚರ್ಸ್‌ಗಳನ್ನು ಒಳಗೊಂಡಿರುವುದು ಈಗ ಲೀಕ್ ಮಾಹಿತಿ ತಿಳಿದುಬಂದಿದೆ.

ಹೌದು, ಶಿಯೋಮಿ ಕಂಪನಿಯು ಇದೀಗ ತನ್ನ ಬಹುನಿರೀಕ್ಷಿತ ರೆಡ್ಮಿ ಕೆ30 ಸ್ಮಾರ್ಟ್‌ಫೋನ್ ಅನ್ನು ಇದೇ ಮಾರ್ಚ್ 24 ರಂದು ಲಾಂಚ್ ಮಾಡಲಿದೆ. ಮೊದಲು ಚೀನಾದಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಆಗಲಿದ್ದು, ಆನಂತರ ಭಾರತಕ್ಕೆ ಎಂಟ್ರಿ ಕೊಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೂಲ್ ಸ್ಕ್ರೀನ್ ಡಿಸ್‌ಪ್ಲೇ ಜೊತೆಗೆ ಪಾಪ್‌ಅಪ್ ಸೆಲ್ಫಿ ಕ್ಯಾಮೆರಾ, ಗೇಮ್ ಟರ್ಬೋ 3.0, ಕ್ಯಾಮೆರಾ ಫೀಚರ್ಸ್‌ಗಳಿಂದ ಭಾರಿ ಕುತೂಹಲ ಮೂಡಿಸಿದೆ.

ಈ ಫ್ಲ್ಯಾಗ್‌ಶಿಪ್ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿರುವುದು ಬಹುತೇಕ ಖಚಿತವಾಗಿದ್ದು, 5G ನೆಟವರ್ಕ್ ಬೆಂಬಲಿಸಲಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿರಲಿದ್ದು, ಮುಖ್ಯ ರಿಯರ್ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಹಾಗೂ ಸೋನಿಯ IMX686 ಲೆನ್ಸ್‌ಗಳನ್ನು ಪಡೆದುಕೊಂಡಿರಲಿದೆ. ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಇರಲಿದೆ.

ಇನ್ನು ರೆಡ್ಮಿ ಕೆ30 ಪ್ರೊ ಡಿಸ್‌ಪ್ಲೇಯು 6.7 ಇಂಚಿನಲ್ಲಿರಲಿದ್ದು, 120Hz/60Hz ಸಾಮರ್ಥ್ಯದ ಸ್ಕ್ರೀನ್ ರೀಫ್ರೇಶ್ ರೇಟ್ ಅನ್ನು ಪಡೆದಿರಲಿದೆ. ಡಿಸ್‌ಪ್ಲೇಯು AMOLED ಮಾದರಿಯಲ್ಲಿರಲಿದ್ದು, ಪಿಕ್ಸಲ್ ರೆಸಲ್ಯೂಶನ್ ಅಧಿಕವಾಗಿರಲಿದೆ. ಇದರೊಂದಿಗೆ ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಮ್ (OS) ವ್ಯವಸ್ಥೆಯನ್ನು ಹೊಂದಿರಲಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ 4,700 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿರುವ ನಿರೀಕ್ಷೆಗಳು ಹೆಚ್ಚಾಗಿವೆ. 6GB RAM ಬೇಸ್ ವೇರಿಯಂಟ್ ಸಾಮರ್ಥ್ಯದಲ್ಲಿ ಲಾಂಚ್ ಆಗಲಿದ್ದು, 128GB ಮತ್ತು 256GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿರಲಿದೆ. ಇದೇ ಮಾರ್ಚ್ 24ರಂದು ಬಿಡುಗಡೆ ಆಗುವುದು ಖಚಿತ ಎನ್ನಲಾಗಿದೆ.


Click it and Unblock the Notifications








