ರೆಡ್‌ಮಿ K30s ಸ್ಮಾರ್ಟ್‌ಫೋನ್‌ ಬಿಡುಗಡೆ!..ಫೀಚರ್ಸ್‌ ವಿಶೇಷತೆ ಏನು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ರೆಡ್‌ಮಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಇದೀಗ ತನ್ನ ಹೊಸ ರೆಡ್‌ಮಿ K30S ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರೆಡ್‌ಮಿ k30, ರೆಡ್ಮಿ k 30 ಪ್ರೊ, ಮತ್ತು K30 ಅಲ್ಟ್ರಾ ಸ್ಮಾರ್ಟ್‌ಫೋನ್‌ ನಂತರ ರೆಡ್‌ಮಿ K30 ಸರಣಿಯಲ್ಲಿ ರೆಡ್‌ಮಿ K30S ಅನ್ನು ಪರಿಚಯಿಸಲಾಗಿದೆ. ಇದು ಮಿ 10T ಯ ರಿಬ್ರ್ಯಾಂಡ್‌ ಆಗಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 144Hz ಡಿಸ್‌ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಅನ್ನು ಒಳಗೊಂಡಿದೆ.

ರೆಡ್‌ಮಿ K30s

ಹೌದು, ರೆಡ್‌ಮಿ ಸಂಸ್ಥೆ ತನ್ನ ಹೊಸ ರೆಡ್‌ಮಿ K30s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರೆಡ್‌ಮಿ K30s ಸ್ಮಾರ್ಟ್‌ಫೋನ್‌ 1,080x2,400 ಫಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 144Hz ವರೆಗೆ ರಿಫ್ರೆಶ್ ರೇಟ್‌ ಮತ್ತು 650 ನಿಟ್ಸ್‌ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಹೊಂದಿದೆ. ಅಲ್ಲದೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB, 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ರೆಡ್‌ಮಿ K30s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 682 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, 123 ಡಿಗ್ರಿ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ K30s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, ಜಿಪಿಎಸ್, ಇನ್ಫ್ರಾರೆಡ್ , ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್‌ಮಿ K30s ಸ್ಮಾರ್ಟ್‌ಫೋನ್‌ ಬೆಲೆ CNY 2,599 (ಸುಮಾರು ರೂ. 28,600)ಕ್ಕೆ ನಿಗದಿಪಡಿಸಲಾಗಿದೆ, ಆದರೆ ಇದರ 256GB ಆಯ್ಕೆಯು CNY 2,799 (ಸುಮಾರು 31,000 ರೂ.) ಬೆಲೆಯನ್ನು ಹೊಂದಿದೆ. ಜೊತೆಗೆ CNY 300 (ಸುಮಾರು 3,300 ರೂ.)ಮೌಲ್ಯದ ಪರಿಚಯಾತ್ಮಕ ರಿಯಾಯಿತಿಯೂ ಇದೆ, ಇದು ಫೋನ್‌ನ ಬೆಲೆಯನ್ನು CNY2,299 (ಸುಮಾರು 25,300 ರೂ.) ಕ್ಕೆ ಇಳಿಸುತ್ತದೆ. ಇದು ಇಂಟರ್ ಸ್ಟೆಲ್ಲಾರ್ ಬ್ಲ್ಯಾಕ್ ಮತ್ತು ಮೂನ್ಲೈಟ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ನವೆಂಬರ್ 11 ರಿಂದ ಮಾರಾಟವಾಗಲಿದೆ.

Best Mobiles in India

Read more about:
English summary
Redmi K30S has officially been announced after a series of rumours and leaks surfacing on the Web.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X