Home
ಸುದ್ದಿಜಾಲ

ಬಹು ನಿರೀಕ್ಷಿತ ರೆಡ್ಮಿ K40 ಪ್ರೊ ಮತ್ತು ರೆಡ್ಮಿ K40 ಪ್ರೊ + ಸ್ಮಾರ್ಟ್‌ಫೋನ್‌ ಲಾಂಚ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಸಂಸ್ಥೆ ತನ್ನ ಬಹುನಿರೀಕ್ಷಿತ ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಸರಣಿಯನ್ನು ಲಾಂಚ್‌ ಮಾಡಿದೆ. ಈ ಸರಣಿಯಲ್ಲಿ ರೆಡ್ಮಿ ಕೆ40, ರೆಡ್ಮಿ ಕೆ40 ಪ್ರೊ ಮತ್ತು ರೆಡ್ಮಿ ಕೆ40 ಪ್ರೊ+ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದ್ದು, ಬಿಗ್‌ ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿವೆ.

ರೆಡ್ಮಿ ಕೆ40

ಹೌದು, ಶಿಯೋಮಿಯ ಕಂಪೆನಿ ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಸರಣಿಯನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸರಣಿಯಲ್ಲಿ ರೆಡ್ಮಿ ಕೆ40 ಪ್ರೊ ಮತ್ತು ಕೆ40 ಪ್ರೊ+ ಸ್ಮಾರ್ಟ್‌ಫೋನ್‌ಗಳು ಗಮನ ಸೆಳೆದಿವೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿವೆ. ಹಾಗಾದರೇ ರೆಡ್ಮಿ ಕೆ40 ಪ್ರೊ ಮತ್ತು ರೆಡ್ಮಿ ಕೆ40 ಪ್ರೊ+ ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ಕೆ40 ಪ್ರೊ ಡಿಸ್‌ಪ್ಲೇ

ರೆಡ್ಮಿ ಕೆ40 ಪ್ರೊ ಡಿಸ್‌ಪ್ಲೇ

ರೆಡ್‌ಮಿ ಕೆ 40 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120 Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಬೆಂಚ್‌ಮಾರ್ಕಿಂಗ್ ಸಂಸ್ಥೆ ಡಿಸ್‌ಪ್ಲೇ ಮೇಟ್‌ನಿಂದ ಎ+ ಪ್ರಮಾಣೀಕರಿಸಲ್ಪಟ್ಟಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ ಕೆ 40 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 686 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ ಅಲ್ಟ್ರಾ-ವೈಡ್-ಆಂಗಲ್ 119 ಡಿಗ್ರಿ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ಕೆ 40 ಪ್ರೊ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್, GPS, NFC, ಇನ್ಫ್ರಾರೆಡ್ (IR), ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

ರೆಡ್ಮಿ ಕೆ 40 ಪ್ರೊ + ಸ್ಮಾರ್ಟ್‌ಫೋನ್‌

ರೆಡ್ಮಿ ಕೆ 40 ಪ್ರೊ + ಸ್ಮಾರ್ಟ್‌ಫೋನ್‌

ರೆಡ್‌ಮಿ ಕೆ 40 ಪ್ರೊ+ ಸ್ಮಾರ್ಟ್‌ಫೋನ್‌ ಕೂಡ 6.67-ಇಂಚಿನ ಫುಲ್‌-ಹೆಚ್‌ಡಿ + E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆದರೆ ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸಹ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಎಚ್‌ಎಂ 2 ಪ್ರಾಥಮಿಕ ಸಂವೇದಕವನ್ನು ಹೊಂದಿದೆ. ಇನ್ನುಳಿದ ವಿಶೇಷತೆಗಳು ರೆಡ್ಮಿ ಕೆ40 ಪ್ರೊ ಮಾದರಿಗೆ ಹೋಲುತ್ತವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ಕೆ 40 ಪ್ರೊ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 2,799 (ಸುಮಾರು 31,500 ರೂ.) ಬೆಲೆಯೊಂದಿಗೆ ಬರುತ್ತದೆ. ಇನ್ನು 8GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ CNY 2,999 (33,800) ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್‌ ಆಯ್ಕೆಯ ಬೆಲೆ CNY 3,299 (ಸುಮಾರು 37,000 ರೂ.) ಆಗಿದೆ. ಮತ್ತೊಂದೆಡೆ, ರೆಡ್‌ಮಿ ಕೆ 40 ಪ್ರೊ + 12GB RAM + 256GB ಬೆಲೆ CNY 3,699 (ಸುಮಾರು ರೂ. 41,600) ಆಗಿದೆ. ರೆಡ್ಮಿ ಕೆ 40 ಪ್ರೊ ಮತ್ತು ರೆಡ್ಮಿ ಕೆ 40 ಪ್ರೊ + ಸ್ಮಾರ್ಟ್‌ಫೋನ್‌ಗಳು ಡ್ರೀಮ್‌ಲ್ಯಾಂಡ್, ಹಿಮಾವೃತ ವೈಟ್ ಮತ್ತು ಹೊಳಪು ಕಪ್ಪು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತವೆ.

Best Mobiles in India

English summary
Redmi K40 Pro, Redmi K40 Pro+ With 120Hz AMOLED Display Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+