ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?..ಫೀಚರ್ಸ್‌ ಏನು?

|

ಶಿಯೋಮಿಯ ಬಹುನಿರೀಕ್ಷಿತ ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಸರಣಿಯು ಬಿಡುಗಡೆ ಆಗಿದೆ. ಈ ಸರಣಿಯು ರೆಡ್ಮಿ ಕೆ40, ರೆಡ್ಮಿ ಕೆ40 ಪ್ರೊ ಮತ್ತು ರೆಡ್ಮಿ ಕೆ40 ಪ್ರೊ+ ಮಾಡೆಲ್‌ಗಳನ್ನು ಒಳಗೊಂಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 120Hz AMOLED ಡಿಸ್‌ಪ್ಲೇ ಹೊಂದಿದ್ದು, ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿವೆ. ಹಾಗೆಯೇ ಅಧಿಕ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಶಿಯೋಮಿಯ

ಹೌದು, ಶಿಯೋಮಿಯ ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಸರಣಿ ಚೀನಾದಲ್ಲಿ ರಿಲೀಸ್ ಆಗಿದ್ದು, ಈ ಸ್ಮಾರ್ಟ್‌ಫೋನ್ ಸರಣಿಯಲ್ಲಿ ರೆಡ್ಮಿ ಕೆ40 ಫೋನ್ ಗಮನ ಸೆಳೆದಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಮುಖ್ಯ ರಿಯರ್ ಕ್ಯಾಮೆರಾ 48ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ 6GB RAM, 8GB RAM ಮತ್ತು 12GB RAM ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ ಕೆ40 ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ ಕೆ30 ಸ್ಮಾರ್ಟ್‌ಫೋನ್ 1080×2400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಡಿಸ್‌ಪ್ಲೇಯಿಂದ ಬಾಹ್ಯ ಬಾಡಿಯ ನಡುವಿನ ಅನುಪಾತವು 20:9 ಆಗಿದೆ. ಡಿಸ್‌ಪ್ಲೇ ರಿಫ್ರೇಶ್‌ ರೇಟ್ 120Hz ಆಗಿದ್ದು, ಹಾಗೆಯೇ 1,300 nits ಬ್ರೈಟ್ನೆಸ್‌ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್‌ ಹಾಗೂ MIUI 12 ಓಎಸ್‌ ಬೆಂಬಲವನ್ನು ಪಡೆದಿದೆ. ಇದರೊಂದಿಗೆ 6GB RAM + 128GB, 8GB RAM + 128GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ತ್ರಿವಳಿ ಸ್ಪೆಷಲ್ ಕ್ಯಾಮೆರಾ

ತ್ರಿವಳಿ ಸ್ಪೆಷಲ್ ಕ್ಯಾಮೆರಾ

ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ರಿಯರ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಅದರಲ್ಲಿ ಮುಖ್ಯ ಕ್ಯಾಮೆರಾವು ಸೋನಿಯ IMX686 ಸೆನ್ಸಾರ್‌ನೊಂದಿಗೆ 48ಎಂಪಿ ಸಾಮರ್ಥ್ಯದಲ್ಲಿದೆ. ಉಳಿದಂತೆ ಇನ್ನೆರಡು ಕ್ಯಾಮೆರಾಗಳು ಕ್ರಮವಾಗಿ 8ಎಂಪಿ ಸೆನ್ಸಾರ್ ಕ್ಯಾಮೆರಾ, 5ಎಂಪಿ ಸೆನ್ಸಾರ್ ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ ಕೆ40 ಸ್ಮಾರ್ಟ್‌ಫೋನ್ 4,520mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಸೌಲಬ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಇನ್ಫ್ರಾರೆಡ್ (ಐಆರ್), ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಮಂಡಳಿಯಲ್ಲಿನ ಸಂವೇದಕಗಳಲ್ಲಿ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಚೀನಾದಲ್ಲಿ ಬಿಡುಗಡೆ ಆಗಿರುವ ರೆಡ್ಮಿ ಕೆ40 ಸ್ಮಾರ್ಟ್‌ಫೋನ್ ಆರಂಭಿಕ 6GB RAM + 128GB ವೇರಿಯಂಟ್ ಬೆಲೆಯು CNY 1,999 (ಭಾರತದಲ್ಲಿ ಅಂದಾಜು 22,500ರೂ. ಎನ್ನಲಾಗಿದೆ). ಇನ್ನು 8GB RAM + 128GB ವೇರಿಯಂಟ್ ಬೆಲೆಯು CNY 2,199 (ಭಾರತದಲ್ಲಿ ಅಂದಾಜು 24,700ರೂ. ಎಂದು ಊಹಿಸಲಾಗಿದೆ). ಗ್ಲೋಬಲ್ ಲಾಂಚ್ ಬಗ್ಗೆ ಸಂಸ್ಥೆಯು ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Redmi K40 price starts at CNY 1,999 (roughly Rs. 22,500), while Redmi K40 Pro begins at CNY 2,799 (roughly Rs. 31,500).

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X