Home
ಸುದ್ದಿಜಾಲ

ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್‌ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?

ಸ್ಮಾರ್ಟ್‌ಫೋನ್‌ ವಲಯದಲ್ಲಿ ಶಿಯೋಮಿ ಕಂಪೆನಿ ರೆಡ್ಮಿ ಬ್ರ್ಯಾಂಡ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ರೆಡ್ಮಿ ಬ್ರ್ಯಾಂಡ್‌ನಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇದೀಗ ಶಿಯೋಮಿ ಕಂಪೆನಿ ಹೊಸ ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮತ್ತು ಶಿಯೋಮಿ ಪ್ಯಾಡ್‌ 5 ಪ್ರೊ 12.4 ಅನ್ನು ಪರಿಚಯಿಸಿದೆ. ಇದರಲ್ಲಿ ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಮೊದಲ ರೆಡ್ಮಿ ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ತನ್ನ ಹೊಸ ಫೊಲ್ಡಬಲ್‌ ಸ್ಮಾರ್ಟ್‌ಫೋನ್‌ ಜೊತೆಯಲ್ಲಿ ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮತ್ತು ಶಿಯೋಮಿ ಪ್ಯಾಡ್‌ 5 ಪ್ರೊ 12.4 ಲಾಂಚ್‌ ಮಾಡಿದೆ. ಇನ್ನು ಶಿಯೋಮಿ ಪ್ಯಾಡ್‌ 5 ಪ್ರೊ 12.4 ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ K50 ಅಲ್ಟ್ರಾ

ರೆಡ್ಮಿ K50 ಅಲ್ಟ್ರಾ

ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.67-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 480Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸ್ಯಾಮ್‌ಸಂಗ್‌ ಐಸೋಸೆಲ್‌ HM6 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೋನಿ IMX596 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ K50 ಅಲ್ಟ್ರಾ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯು ಚೀನಾ ಮಾರುಕಟ್ಟೆಯಲ್ಲಿ CNY 3,000 (ಅಂದಾಜು 35,483ರೂ) ಬೆಲೆ ಹೊಂದಿದೆ. ಹಾಗೆಯೇ 256GB ರೂಪಾಂತರದ ಆಯ್ಕೆಯು CNY 3,100 (ಅಂದಾಜು 36,665ರೂ) ಬೆಲೆ ಪಡೆದುಕೊಂಡಿದೆ. ಅಲ್ಲದೆ 12GB RAM ಮತ್ತು 256GB ಆವೃತ್ತಿಯ ಬೆಲೆ CNY 3,400 (ಅಂದಾಜು 40,214ರೂ)ಯನ್ನು ನಿಗಧಿಪಡಿಸಲಾಗಿದೆ.

ಶಿಯೋಮಿ ಪ್ಯಾಡ್ 5 ಪ್ರೊ 12.4

ಶಿಯೋಮಿ ಪ್ಯಾಡ್ 5 ಪ್ರೊ 12.4

ಶಿಯೋಮಿ ಪ್ಯಾಡ್‌ 5 ಪ್ರೊ 12.4 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಟ್ಯಾಬ್ಲೆಟ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20ಮೆಗಾಪಿಕ್ಸೆಲ್‌ ಸೋನಿ IMX596 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 10,000mAh ಬ್ಯಾಟರಿಯನ್ನು ಒಳಗೊಂಡಿದೆ. ಇದನ್ನು ನೀವು ಕೇವಲ 68 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಶಿಯೋಮಿ ಕಂಪೆನಿ ಹೇಳಿಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಪ್ಯಾಡ್‌ 5 ಪ್ರೊ 12.4 ಟ್ಯಾಬ್‌ 6GB ಮತ್ತು 128GB ಇಂಟರ್‌ ಸ್ಟೋರೇಜ್ ಆಯ್ಕೆಗೆ CNY 3,000 (ಅಂದಾಜು 35,483ರೂ)ಬೆಲೆ ಹೊಂದಿದೆ. ಆದರೆ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯು ನಿಮಗೆ CNY 3,500 (ಸುಮಾರು 41,900 ರೂ.) ವೆಚ್ಚವಾಗುತ್ತದೆ. ಇನ್ನು ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್‌ 5 ಪ್ರೊ 12.4 ಭಾರತದಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Redmi K50 Ultra, Xiaomi Pad 5 Pro 12.4 launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+