ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟ 'ರೆಡ್ಮಿ K50i 5G' ಸ್ಮಾರ್ಟ್‌ಫೋನ್!..ಬೆಲೆ ಎಷ್ಟು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ಸಂಸ್ಥೆ ತನ್ನ ಬಹುನಿರೀಕ್ಷಿತ ರೆಡ್ಮಿ K50i ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ರೆಡ್ಮಿ K ಸರಣಿಯ ಮುಂದುವರಿದ ಭಾಗವಾಗಿದ್ದು, ಕೆಲವೊಂದು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಹೊಸ ರೆಡ್ಮಿ K50i ಫೋನ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಜೊತೆಗೆ 144Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ನೂತನವಾಗಿ ಬಿಡುಗಡೆ ಆಗಿರುವ ಶಿಯೋಮಿಯ ಕಂಪೆನಿ ರೆಡ್ಮಿ K50i ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳಲ್ಲಿ ಕಾಣಿಸಿಕೊಂಡಿದೆ. ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಗಿವೆ. ಹಾಗೆಯೇ ಈ ಮೊಬೈಲ್ 5080 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇದರೊಂದಿಗೆ ಡ್ಯುಯಲ್ ಸ್ಪೀಕರ್ ಇದ್ದು, ಅವು ಡಾಲ್ಬಿ ಆಟ್ಮೋಸ್ ಸಪೋರ್ಟ್ ಹೊಂದಿವೆ.

ರೆಡ್ಮಿ K50i ಮೊಬೈಲ್ ತೆಳುವಾದ ರಚನೆಯನ್ನು ಪಡೆದಿದ್ದು, 8.87ಎಂಎಂ ರಚನೆಯನ್ನು ಹೊಂದಿದೆ. ಹಾಗೆಯೇ ಇದು 200ಗ್ರಾಂ ತೂಕವನ್ನು ಹೊಂದಿದೆ. ಇನ್ನು ರೆಡ್ಮಿ K50i ಮೊಬೈಲ್ ಬ್ಲ್ಯಾಕ್, ಬ್ಲೂ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ ಇದೆ. ಇನ್ನುಳಿದಂತೆ ರೆಡ್ಮಿ K50i ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ K50i: ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 20.5:9 ರಚನೆಯನ್ನು ಹೊಂದಿದ್ದು, ಫೋನಿನ ಮೇಲ್ಭಾಗದ ಮಧ್ಯದಲ್ಲಿ ಪಂಚ್‌ಹೋಲ್ ರಚನೆ ಇದೆ. ಜೊತೆಗೆ 144Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್ ಸಹ ಪಡೆದಿದೆ.

ರೆಡ್ಮಿ K50i: ಪ್ರೊಸೆಸರ್ ಪವರ್
ರೆಡ್ಮಿ K50i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳಲ್ಲಿ ಕಾಣಿಸಿಕೊಂಡಿದೆ. ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಗಿವೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶದ ಬಗ್ಗೆ ಮಾಹಿತಿ ಇಲ್ಲ.

ರೆಡ್ಮಿ K50i: ಕ್ಯಾಮೆರಾ ಸೆನ್ಸಾರ್ ರಚನೆ
ರೆಡ್ಮಿ K50i ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ರೆಡ್ಮಿ K50i: ಬ್ಯಾಟರಿ ಪವರ್ ಹಾಗೂ ಇತರೆ
ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ IP53 ರೇಟಿಂಗ್, ಡಾಲ್ಬಿ ಅಟ್ಮೋಸ್, X-Axis ಮೋಟಾರ್, 12 5G ಬ್ಯಾಂಡ್‌ಗಳು, Wi-Fi 6, 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ. 5.3, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಐಆರ್ ಬ್ಲಾಸ್ಟರ್.

ರೆಡ್ಮಿ K50i: ಬೆಲೆ ಎಷ್ಟು ಮತ್ತು ಲಭ್ಯತೆ
ರೆಡ್ಮಿ K50i ಸ್ಮಾರ್ಟ್‌ಫೋನ್ 6GB + 128GB ರೂಪಾಂತರಕ್ಕೆ 25,999 ರೂ. ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ಫೋನ್ ಬೆಲೆ 28,999 ರೂ. ಆಗಿದೆ. ಇನ್ನು ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ. ಈ ಫೋನಿನ ಮೊದಲ ಮಾರಾಟ ಇದೇ ಜುಲೈ 23 ರಂದು ನಿಗದಿಪಡಿಸಲಾಗಿದೆ.

ರೆಡ್ಮಿ K50i: ಲಾಂಚ್ ಆಫರ್‌ಗಳು
* ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 3,000 ರೂ. ವರೆಗೆ ತ್ವರಿತ ರಿಯಾಯಿತಿ
* 2,5000 ವರೆಗೆ ಹೆಚ್ಚುವರಿ ವಿನಿಮಯ ಬೋನಸ್
* ರೆಡ್ಮಿ K20 ಪ್ರೊ ಬಳಕೆದಾರರು ವಿನಿಮಯ ಮತ್ತು ಕಾರ್ಡ್ ಕೊಡುಗೆಗಳೊಂದಿಗೆ ಫೋನ್ ಅನ್ನು 12,499 ರೂ. ಪಡೆಯಬಹುದು
* ಅಮೆಜಾನ್ ನಲ್ಲಿ ಅಮೆಜಾನ್ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್
* ಯಾವುದೇ ವೆಚ್ಚದ EMI ಆಯ್ಕೆಗಳು

ರೆಡ್ಮಿ 10 ಪವರ್ ಫೀಚರ್ಸ್
ಇತ್ತೀಚಿಗೆ ಬಿಡುಗಡೆ ಆಗಿರುವ ರೆಡ್ಮಿ 10 ಪವರ್ ಫೋನ್ ಕೆಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ HD+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಹೊಂದಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಇದರಲ್ಲಿ 3GB ವರೆಗಿನ ಇಂಟರ್‌ಬಿಲ್ಟ್ ಸ್ಟೋರೇಜ್ 3GB ವರೆಗೆ ಬಳಸಿಕೊಂಡು ಬಳಕೆದಾರರು ಲಭ್ಯವಿರುವ RAM ಅನ್ನು ವಾಸ್ತವಿಕವಾಗಿ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ವಿಸ್ತರಿಸಬಹುದಾಗಿದೆ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಒಳಗೊಂಡಿದೆ.


Click it and Unblock the Notifications








