ರೆಡ್ಮಿ ಸಂಸ್ಥೆಯ ಈ 5G ಸ್ಮಾರ್ಟ್‌ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್‌!

|

ಶಿಯೋಮಿ ಕಂಪನಿಯು ಇತ್ತೀಚಿಗೆ 5G ಸ್ಮಾರ್ಟ್‌ಫೋನ್‌ಗಳೊಂದಿಗೆ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆಯುತ್ತಿದೆ. ಇತ್ತೀಚಿಗಷ್ಟೆ ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ಭಾರೀ ಸದ್ದು ಮಾಡಿದೆ. ಅದರ ಬೆನ್ನಲ್ಲೇ ಇದೀಗ ರೆಡ್ಮಿಯ 5G ಫೋನ್‌ ಒಂದು ಭಾರೀ ಡಿಸ್ಕೌಂಟ್‌ ಪಡೆದಿದ್ದು, 5G ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಅದುವೇ ರೆಡ್ಮಿ ರೆಡ್ಮಿ K50i 5G ಸ್ಮಾರ್ಟ್‌ಫೋನ್.

ರಿಯಾಯಿತಿ

ಹೌದು, ಶಿಯೋಮಿಯ ಕಂಪೆನಿ ರೆಡ್ಮಿ K50i ಫೋನ್ ಕ್ರೋಮಾ ಪ್ಲಾಟ್‌ಫಾರ್ಮ್ ಕ್ರೋಮಾ ಅರ್ಲಿ ಬರ್ಡ್ ಸೇಲ್ ಡೀಲ್ (Croma Early Bird Sale Deal) ನಲ್ಲಿ 4,000 ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಎರಡು ವೇರಿಯಂಟ್‌ ಮಾಡೆಲ್‌ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ.

ಕ್ಯಾಶ್‌ಬ್ಯಾಕ್

ಫೋನ್ ಖರೀದಿಯ ಮೇಲೆ ಕ್ರೋಮಾ 1,000ರೂ. ತ್ವರಿತ ರಿಯಾಯಿತಿ ಕೂಪನ್ ಅನ್ನು ನೀಡುತ್ತಿದೆ. ಹೆಚ್ಚುವರಿಯಾಗಿ, ICICI ಕ್ರೆಡಿಟ್ ಕಾರ್ಡ್ ಚಂದಾದಾರರು 3,000 ರೂ. ವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು. ಆದರೆ, HDFC ಕ್ರೆಡಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿ 10% ರಿಯಾಯಿತಿಯನ್ನು (2,000 ವರೆಗೆ) ಪಡೆಯಬಹುದು. ಇನ್ನು 6GB RAM + 128GB ವೇರಿಯಂಟ್‌ 21,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗಲಿದೆ. 8GB + 256GB ವೇರಿಯಂಟ್‌ ಫೋನ್ 24,999 ರೂ. ಗಳ ಬೆಲೆಯಲ್ಲಿ ದೊರೆಯಲಿದೆ. ಇನ್ನುಳಿದಂತೆ ರೆಡ್ಮಿ K50i ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ K50i: ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರೆಡ್ಮಿ K50i: ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 20.5:9 ರಚನೆಯನ್ನು ಹೊಂದಿದ್ದು, ಫೋನಿನ ಮೇಲ್ಭಾಗದ ಮಧ್ಯದಲ್ಲಿ ಪಂಚ್‌ಹೋಲ್‌ ರಚನೆ ಇದೆ. ಜೊತೆಗೆ 144Hz ರಿಫ್ರೇಶ್‌ ರೇಟ್‌ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್‌ ಸಹ ಪಡೆದಿದೆ.

ರೆಡ್ಮಿ K50i: ಪ್ರೊಸೆಸರ್‌ ಪವರ್‌

ರೆಡ್ಮಿ K50i: ಪ್ರೊಸೆಸರ್‌ ಪವರ್‌

ರೆಡ್ಮಿ K50i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್‌ ಮಾಡೆಲ್‌ಗಳಲ್ಲಿ ಕಾಣಿಸಿಕೊಂಡಿದೆ. ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶದ ಬಗ್ಗೆ ಮಾಹಿತಿ ಇಲ್ಲ.

ರೆಡ್ಮಿ K50i: ಕ್ಯಾಮೆರಾ ಸೆನ್ಸಾರ್ ರಚನೆ

ರೆಡ್ಮಿ K50i: ಕ್ಯಾಮೆರಾ ಸೆನ್ಸಾರ್ ರಚನೆ

ರೆಡ್ಮಿ K50i ಸ್ಮಾರ್ಟ್‌ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದ್ದು, ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ರೆಡ್ಮಿ K50i: ಬ್ಯಾಟರಿ ಪವರ್‌ ಹಾಗೂ ಇತರೆ

ರೆಡ್ಮಿ K50i: ಬ್ಯಾಟರಿ ಪವರ್‌ ಹಾಗೂ ಇತರೆ

ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ IP53 ರೇಟಿಂಗ್, ಡಾಲ್ಬಿ ಅಟ್ಮೋಸ್‌, X-Axis ಮೋಟಾರ್, 12 5G ಬ್ಯಾಂಡ್‌ಗಳು, Wi-Fi 6, 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ. 5.3, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಐಆರ್ ಬ್ಲಾಸ್ಟರ್.

Best Mobiles in India

English summary
Redmi K50i Available at a Discounted Price at Croma Platform: Check Offer Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X