Just In
- 14 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 15 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 16 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 18 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Movies
ವಿಷ್ಣು ಸ್ಮಾರಕ ಉದ್ಘಾಟನೆ: ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತಿದೆ ಎಂದ ಕಿಚ್ಚ ಸುದೀಪ್
- News
Breaking; ಪಿಎಸ್ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್ ಸೂದ್ ಟ್ವೀಟ್
- Sports
U-19 Women's T20 World Cup 2023: ಭಾರತ ತಂಡವನ್ನು ಭೇಟಿ ಮಾಡಿದ 'ಚಿನ್ನದ ಹುಡುಗ' ನೀರಜ್ ಚೋಪ್ರಾ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!..ಹೊಸ ವರ್ಷಕ್ಕೂ ಮುನ್ನವೇ ಭಾರಿ ಸಂಚಲನ!
ಶಿಯೋಮಿ ಕಂಪೆನಿ ತನ್ಮ ರೆಡ್ಮಿ ಬ್ರ್ಯಾಂಡ್‌ನಲ್ಲಿ ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಮೂಲಕ ಟೆಕ್ ಮಾರುಕಟ್ಟೆಯಲ್ಲಿ ಹೊಸ ವರ್ಷಕ್ಕೂ ಮುನ್ನವೇ ಭಾರಿ ಸಂಚಲನ ಸೃಷ್ಟಿಸಿದೆ. ಸದ್ಯ ಶಿಯೋಮಿ ಕಂಪೆನಿ ರೆಡ್ಮಿ K60 ಸರಣಿ ಮೂಲಕ ಸದ್ದು ಮಾಡ್ತಿದೆ. ಇನ್ನು ಈ ಸರಣಿಯಲ್ಲಿ ರೆಡ್ಮಿ K60, ರೆಡ್ಮಿ K60 ಪ್ರೊ ಮತ್ತು ರೆಡ್ಮಿ K60E ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ ತನ್ನ ಅತ್ಯಾಕರ್ಷಕ ಫೀಚರ್ಸ್‌ಗಳ ಮೂಲಕ ಸಿಕ್ಕಾಪಟ್ಟೆ ಟ್ರೆಂಡ್ ಹುಟ್ಟುಹಾಕಿದೆ.

ಹೌದು, ಹೊಸವರ್ಷಕ್ಕೂ ಮುನ್ನವೇ ರೆಡ್ಮಿ K60 ಸರಣಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸುವ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?
ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ 2K ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440x3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 480Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ. ಈ ಡಿಸ್‌ಪ್ಲೇಯು HDR10+ ಬೆಂಬಲವನ್ನು ಸಹ ಹೊಂದಿದ್ದು,1,400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನು ಕ್ವಾಲ್ಕಾಮ್ AI ಎಂಜಿನ್‌ನೊಂದಿಗೆ ಜೋಡಿಸಲಾಗಿದೆ. ಇದು ಆಂಡ್ರಾಯ್ಡ್ 13 ಆಧಾರಿತ MIUI 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 512GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಕ್ಯಾಮೆರಾ ಸೆಟ್‌ಅಪ್
ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX800 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದರ ಮೂಲಕ 60fps ನಲ್ಲಿ ಫುಲ್ HD ವೀಡಿಯೊಗಳನ್ನು ರೆಕಾರ್ಡ್ ಮಾಡಬಹುದು.

ಬ್ಯಾಟರಿ ಮತ್ತು ಇತರೆ
ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 30W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6, NFC ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಬೆಂಬಲವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ K60 ಪ್ರೊ ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 3,299 (ಸುಮಾರು 40,000ರೂ)ಬೆಲೆ ಹೊಂದಿದೆ. ಇದರ 16GB RAM + 512GB ಸ್ಟೋರೇಜ್ ಆಯ್ಕೆಗೆ CNY 4,599 (ಸುಮಾರು 55,000ರೂ)ಬೆಲೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಯಾವಾಗ ಎಂಟ್ರಿ ನೀಡಲಿದೆ ಅನ್ನೊದು ಇನ್ನು ಕನ್ಫರ್ಮ್ ಆಗಿಲ್ಲ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470