ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್; 200MP ಕ್ಯಾಮೆರಾ ವಿಶೇಷ!
ಮೊಬೈಲ್ ಮಾರುಕಟ್ಟೆಯಲ್ಲಿ ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ. ಈಗಾಗಲೇ ತನ್ನ ಡಿಸೈನ್ ಲೀಕ್ ಮೂಲಕ ಸಂಚಲನ ಸೃಷ್ಟಿಸಿದ್ದ ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಇದೀಗ ಬಿಡುಗಡೆಗೆ ತಯಾರಾಗಿದೆ ಎನ್ನುವ ಸುದ್ದಿ ಹರಡಿದೆ. ಅಷ್ಟೇ ಅಲ್ಲ ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ನ ಫೀಚರ್ಸ್ ಕೂಡ ಬಹಿರಂಗವಾಗಿದೆ.
ಹೌದು, ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಈ ಸ್ಮಾರ್ಟ್‌ಫೋನ್ ಇದೇ ತಿಂಗಳ ಅಂತ್ಯದಲ್ಲಿ ಲಾಂಚ್ ಆಗುವ ನಿರೀಕ್ಷೆ ಇಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K60 ಅಲ್ಟ್ರಾ 5G ಡಿಸ್‌ಪ್ಲೇ ನಿರೀಕ್ಷೆ?
ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಬಹುದು. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತದೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇ 446 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ರೆಡ್ಮಿ K60 ಅಲ್ಟ್ರಾ 5G ಪ್ರೊಸೆಸರ್ ಬಲವೇನು?
ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ 4nm ಫ್ಯಾಬ್ರಿಕೇಶನ್ ಪ್ರಕ್ರಿಯೆಯ ಆಧಾರದ ಮೇಲೆ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ ಎಂದು ದೃಢೀಕರಿಸಲಾಗಿದೆ. ಇದು ಆಂಡ್ರಾಯ್ಡ್ 13-ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಆಯ್ಕೆಯಲ್ಲಿ ಬರಬಹುದು ಎನ್ನುವ ನಿರೀಕ್ಷೆ ಇಡಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ನೀಡುವ ಸಾಧ್ಯತೆಯಿದೆ.
ರೆಡ್ಮಿ K60 ಅಲ್ಟ್ರಾ 5G ಕ್ಯಾಮೆರಾ ವಿವರ
ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.
ರೆಡ್ಮಿ K60 ಅಲ್ಟ್ರಾ 5G ಬ್ಯಾಟರಿ ಮತ್ತು ಸಾಮರ್ಥ್ಯ
ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-ಸಿ ಪೋರ್ಟ್, GPS, ಬ್ಲೂಟೂತ್ 5.3, Wi-Fi, ಹಾಟ್‌ಸ್ಪಾಟ್ ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಆವಿ ಚೇಂಬರ್ ಕೂಲಿಂಗ್ ಸಿಸ್ಟಮ್ ಅನ್ನು ಸಹ ಹೊಂದಿರುವ ಸಾಧ್ಯತೆಯಿದೆ.
ರೆಡ್ಮಿ K60 ಅಲ್ಟ್ರಾ 5G ಬೆಲೆ ಹಾಗೂ ಲಭ್ಯತೆ
ರೆಡ್ಮಿ K60 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಇದೇ ತಿಂಗಳ ಅಂತ್ಯದಲ್ಲಿ ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದೆ. ನಂತರದ ದಿನಗಳಲ್ಲಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾದ್ಯತೆಯಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ವಿವರಗಳು ಮಾತ್ರ ಬಹಿರಂಗವಾಗಿದ್ದು, ಬಲೆ ವಿವರಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.


Click it and Unblock the Notifications








