Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ರೆಡ್ಮಿ K70 ಪ್ರೊ ಫೀಚರ್ಸ್‌!

ರೆಡ್ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಆರ್ಭಟಿಸುವುದು ಹೊಸತೇನಲ್ಲ. ತಮ್ಮ ವಿಭಿನ್ನ ಶೈಲಿ ಹಾಗೂ ಡಿಸೈನ್‌ನಿಂದಾಗಿ ಮೊಬೈಲ್‌ ಪ್ರಿಯೆ ಮನಗೆದ್ದಿವೆ. ಇದೀಗ ಅದೇ ಸಾಲಿನಲ್ಲಿ ರೆಡ್ಮಿ K70 ಸರಣಿ ಸೇರುವ ಸೂಚನೆ ದೊರೆತಿದ್ದು, ಬಿಡುಗಡೆಗೂ ಮುನ್ನವೇ ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸೌಂಡ್‌ ಮಾಡುತ್ತಿವೆ.

ಹೌದು, ರೆಡ್ಮಿ K70 ಸರಣಿ ಸ್ಮಾರ್ಟ್‌ಫೋನ್‌ಗಳು ಎಂಟ್ರಿಗೂ ಮುನ್ನವೇ ಫೀಚರ್ಸ್‌ ಸೋರಿಕೆಯಾಗಿದೆ. ಈ ಸರಣಿಯಲ್ಲಿ ರೆಡ್ಮಿ K70 ಮತ್ತು ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ಗಳು ಬರಲಿವೆ ಎಂದು ಹೇಳಲಾಗಿದೆ. ಹಾಗಾದ್ರೆ ರೆಡ್ಮಿ K70 ಸರಣಿ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳಲ್ಲಿ ಏನೆಲ್ಲಾ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ರೆಡ್ಮಿ K70 ಪ್ರೊ ಫೀಚರ್ಸ್‌!

ರೆಡ್ಮಿ K70 ಸರಣಿ ಫೀಚರ್ಸ್‌ ನಿರೀಕ್ಷೆ?
ರೆಡ್ಮಿ K70 ಸರಣಿಯ ರೆಡ್ಮಿ K70 ಮತ್ತು ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ಗಳು ಬಹುತೇಕ ಒಂದೇ ಮಾದರಿಯ ಫೀಚರ್ಸ್‌ನೊಂದಿಗೆ ಬರುವ ಸೂಚನೆ ನೀಡಿವೆ. ಇದರಲ್ಲಿ ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸೈನ್‌ ಹೊಂದಿರಲಿದೆ ಎನ್ನಲಾಗಿದೆ. ಇದು LED ಫ್ಲ್ಯಾಷ್‌ನೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಜೊತೆಗೆ ಫೋನ್‌ನ ಅಂಚುಗಳು ಹೊಳೆಯುವ ಆಕರ್ಷಣೆಯನ್ನು ಹೊಂದಿವೆ ಎಂದು ನಿರೀಕ್ಷಿಸಲಾಗಿದೆ.

ರೆಡ್ಮಿ K70 ಪ್ರೊ ಡಿಸ್‌ಪ್ಲೇ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ನಿರೀಕ್ಷಿಸಲಾಗಿದೆ. ಇನ್ನು ಡಿಸ್‌ಪ್ಲೇ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಬಹುದು ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇ 2400Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್, HDR10+, HDR Vivid, 1400 ನೀಟ್ಸ್‌ ಬ್ರೈಟ್‌ನೆಸ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದರೊಂದಿಗೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್‌ ಹಾಗೂ 480 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ರೆಡ್ಮಿ K70 ಪ್ರೊ ಫೀಚರ್ಸ್‌!

ರೆಡ್ಮಿ K70 ಪ್ರೊ ಪ್ರೊಸೆಸರ್‌ ಸಾಮರ್ಥ್ಯ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡುವ ನಿರೀಕ್ಷೆಯನ್ನು ಸಹ ಇಡಲಾಗಿದೆ.

ರೆಡ್ಮಿ K70 ಪ್ರೊ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಆಯ್ಕೆಯೊಂದಿಗೆ ಬರುವ ನಿರೀಕ್ಷೆ ಇಡಲಾಗಿದೆ.

ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ರೆಡ್ಮಿ K70 ಪ್ರೊ ಫೀಚರ್ಸ್‌!

ರೆಡ್ಮಿ K70 ಪ್ರೊ ಬ್ಯಾಟರಿ ಮತ್ತು ಇತರೆ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ 5,120mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋ ಮೀಟರ್‌ ಅನ್ನು ಸಹ ಹೊಂದಿರಲಿದೆ ಎನ್ನಲಾಗಿದೆ.

ರೆಡ್ಮಿ K70 ಪ್ರೊ ಬೆಲೆ ಮತ್ತು ಲಭ್ಯತೆ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ ನವೆಂಬರ್‌ ಅಂತ್ಯದ ವೇಳೆಗೆ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಸಾಧ್ಯತೆಯಿದೆ.

Best Mobiles in India

English summary
Redmi K70 Pro Smartphone features leaked ahead of launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+