ರೆಡ್ಮಿ K70 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ.. ಏನೆಲ್ಲಾ ನಿರೀಕ್ಷಿಸಲಾಗಿದೆ!
ರೆಡ್ಮಿ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಶಿಯೋಮಿ ಕಂಪೆನಿ ಕೂಡ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಅದರಂತೆ ರೆಡ್ಮಿ K70 ಸರಣಿಯನ್ನು ಪರಿಚಯಿಸುವುದಕ್ಕೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡುವ ನಿರೀಕ್ಷೆಯನ್ನು ಇಡಲಾಗಿದೆ.
ಹೌದು, ರೆಡ್ಮಿ K70 ಸ್ಮಾರ್ಟ್‌ಫೋನ್ ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸರಣಿ ಸ್ಮಾರ್ಟ್‌ಫೋನ್‌ಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗಳು ಇದೀಗ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ರೆಡ್ಮಿ K70 ಪ್ರಿ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ರಡ್ಮಿ K70 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ ನೀವು ನೀರಿಕ್ಷಿಸಬಹುದಾದ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K70 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1440 x 3200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆಯಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಡಿಸ್‌ಪ್ಲೇ 2400Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್, HDR10+, HDR Vivid, 1400 ನೀಟ್ಸ್ ಬ್ರೈಟ್‌ನೆಸ್‌ನೊಂದಿಗೆ ಬರಬಹುದು. ಇದರೊಂದಿಗೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್ ಹಾಗೂ 480 Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.
ರೆಡ್ಮಿ K70 ಪ್ರೊ ಪ್ರೊಸೆಸರ್ ಯಾವುದು?
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡುವ ನಿರೀಕ್ಷೆಯನ್ನು ಸಹ ಇಡಲಾಗಿದೆ.
ರೆಡ್ಮಿ K70 ಪ್ರೊ ಕ್ಯಾಮೆರಾ ಸೆಟ್‌ಅಪ್ ಏನಿದೆ?
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 MP ಸೆನ್ಸಾರ್, ಎರಡನೇ ಕ್ಯಾಮೆರಾ 32 MP ಸೆನ್ಸಾರ್, ಮೂರನೇ ಕ್ಯಾಮೆರಾ 5 MP ಸೆನ್ಸಾರ್ ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರುವ ಸಾಧ್ಯತೆ ಸಹ ಇದೆ.
ರೆಡ್ಮಿ K70 ಪ್ರೊ ಬ್ಯಾಟರಿ ಮತ್ತು ಇತರೆ
ರೆಡ್ಮಿ K70 ಪ್ರೊ ಸ್ಮಾರ್ಟ್‌ಫೋನ್ 5,120mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋ ಮೀಟರ್ ಅನ್ನು ಸಹ ಹೊಂದಿರಲಿದೆ ಎನ್ನಲಾಗಿದೆ.
ಇನ್ನು ಇತ್ತೀಚಿಗೆ ಬಿಡುಗಡೆ ಆಗಿರುವ ರೆಡ್ಮಿ 12 ಸರಣಿ ಸಾಕಷ್ಟು ಸೌಂಡ್ ಮಾಡ್ತಿದೆ. ಇದರಲ್ಲಿ ರೆಡ್ಮಿ 12 4G ಸ್ಮಾರ್ಟ್‌ಫೋನ್ 6.79 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು 1080x2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಅನ್ನು ರನ್ ಮಾಡುತ್ತದೆ. ಹಾಗೂ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್ ಪ್ಯಾಕ್ ಆಗಿದೆ.


Click it and Unblock the Notifications








