ರೆಡ್ಮಿ ಲಾಂಚ್ ಮಾಡುವ ಈ ಹೊಸ ಫೋನ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುವುದು ಖಚಿತ!
ಮೊಬೈಲ್ ಮಾರುಕಟ್ಟೆಯಲ್ಲಿ ಪ್ರಮುಖ ಬ್ರ್ಯಾಂಡ್‌ಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿರುವ ಶಿಯೋಮಿ ಸಂಸ್ಥೆಯ ರೆಡ್ಮಿ ಸರಣಿಯಲ್ಲಿ ಹಲವು ಭಿನ್ನ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಸಾಲಿಗೆ ಈಗ ನೂತನವಾಗಿ ರೆಡ್ಮಿ K70 ( Redmi K70 ) ಸ್ಮಾರ್ಟ್‌ಫೋನ್ ಸರಣಿ ಲಾಂಚ್ ಮಾಡಲು ಸಂಪೂರ್ಣ ತಯಾರಾಗುತ್ತಿದೆ. ಈಗಾಗಲೇ ಈ ಸರಣಿಯ ಲೀಕ್ ಫೀಚರ್ಸ್ ಗ್ರಾಹಕರ ಗಮನ ಸೆಳೆದಿವೆ.
ಹೌದು, ಶಿಯೋಮಿ ಸಂಸ್ಥೆಯು ರೆಡ್ಮಿ K70 ಸ್ಮಾರ್ಟ್‌ಫೋನ್ (Redmi K70) ಸರಣಿಯು ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅಂದಹಾಗೆ ಈ ಸರಣಿಯು ರೆಡ್ಮಿ K60 ಸರಣಿಯ ಮುಂದುವರಿದ ಭಾಗವಾಗಿದೆ. ಇನ್ನು ರೆಡ್ಮಿ K70 ಸ್ಮಾರ್ಟ್‌ಫೋನ್ ಸರಣಿಯು ರೆಡ್ಮಿ K70, ರೆಡ್ಮಿ K70 ಪ್ರೊ ಹಾಗೂ ರೆಡ್ಮಿ K70e ಮಾಡೆಲ್‌ಗಳನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ.

ಶಿಯೋಮಿ ಸಂಸ್ಥೆಯ ನೂತನ ರೆಡ್ಮಿ K70 ಸ್ಮಾರ್ಟ್‌ಫೋನ್ 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರುತ್ತೆ ಜೊತೆಗೆ ಇದು 5G ಸಂಪರ್ಕದ ಬೆಂಬಲ ಕೂಡಾ ಒಳಗೊಂಡಿರುತ್ತದೆ. ಅಲ್ಲದೇ ಇದು MIUI 15 ಸಾಫ್ಟ್‌ವೇರ್ ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಹೊಂದಿರುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.
ಹೊಸ ರೆಡ್ಮಿ K70 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಆದರೆ k70 ಪ್ರೊ ವೇರಿಯಂಟ್ ಮಾಡೆಲ್ ರೂಪಾಂತರವು ಸ್ನ್ಯಾಪ್‌ಡ್ರಾಗನ್ 8 ಜೆನ್ 3 SoC ಚಿಪ್‌ಸೆಟ್ ಪ್ರೊಸೆಸರ್ ಪಡೆದಿರುವ ಸಾಧ್ಯತೆಗಳು ಇವೆ. ಇನ್ನು ರೆಡ್ಮಿ K70e ಮಾಡೆಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸುವ ಸಾಧ್ಯತೆಗಳು ಇವೆ.

ಬರಲಿರುವ ಈ ನೂತನ ಫೋನ್ ಸರಣಿಯು ಇತ್ತೀಚಿನ ಹೊಸ ಆಂಡ್ರಾಯ್ಡ್ 14 ಓಎಸ್ ಹೊಂದಿರಲಿದೆ ಜೊತೆಗೆ 16 GB RAM ವೇರಿಯಂಟ್ ಆಯ್ಕೆ ಇರುವ ನಿರೀಕ್ಷೆಗಳು ಇವೆ. ಕೆಲವು ವರದಿಗಳ ಮಾಹಿತಿಯಂತೆ ಈ ನೂತನ ಸರಣಿಯು ಇದೇ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳು ಇವೆ.
ರೆಡ್ಮಿ K60 ಅಲ್ಟ್ರಾ 5G ಫೋನ್ ಫೀಚರ್ಸ್
ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಜೊತೆಗೆ 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಪಡೆದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಲ್ಲದೇ ಆಂಡ್ರಾಯ್ಡ್ 13 ಆಧಾರಿತ MIUI 14 ಬೆಂಬಲ ಸಹ ಇದ್ದು, 16 GB RAM ಮತ್ತು 512 GB ಆಯ್ಕೆ ಇದೆ.
ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಆಗಿದೆ. ಅಲ್ಲದೇ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಲಭ್ಯ ಇದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 120W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








