ಗ್ರ್ಯಾಂಡ್ ಎಂಟ್ರಿ ಕೊಟ್ಟ ರೆಡ್ಮಿ K70 ಸ್ಮಾರ್ಟ್‌ಫೋನ್! 4000 ನಿಟ್ಸ್ ಪೀಕ್ ಬ್ರೈಟ್‌ನೆಸ್ ವಿಶೇಷ!
ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ರೆಡ್ಮಿ K70 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಬರಲಿದೆ.
ಹೌದು, ರೆಡ್ಮಿ K70 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 3840Hz PWM ಹೈ-ಫ್ರೀಕ್ವೆನ್ಸಿ ಡಿಮ್ಮಿಂಗ್ ಅನ್ನು ಒಳಗೊಂಡಿದೆ. ಜೊತೆಗೆ 5,120mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K70 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ರೆಡ್ಮಿ K70 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2712 x 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 120Hz ರಿಫ್ರೆಶ್ ರೇಟ್, 3840Hz PWM ಡಿಮ್ಮಿಂಗ್, 4000nit ಪೀಕ್ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ HDR ವಿಷನ್ ಕಟ್‌ಔಟ್ ಅನ್ನು ಹೊಂದಿದ್ದು, ಪಂಚ್-ಹೋಲ್ ಕಟೌಟ್ ವಿನ್ಯಾಸ ಪಡೆದಿದೆ.
ರೆಡ್ಮಿ K70 ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ರೆಡ್ಮಿ K70 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು HyperOS-ಆಧಾರಿತ ಆಂಡ್ರಾಯ್ಡ್ 14 OS ಅನ್ನು ಬಾಕ್ಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 24GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ರೆಡ್ಮಿ K70 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ರೆಡ್ಮಿ K70 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ರೆಡ್ಮಿ K70 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ರೆಡ್ಮಿ K70 ಸ್ಮಾರ್ಟ್‌ಫೋನ್ 5,120mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS, NFC ಮತ್ತು ಚಾರ್ಜ್ ಮಾಡಲು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಸ್ಟಿರಿಯೊ ಸ್ಪೀಕರ್‌ಗಳು, ಹ್ಯಾಪ್ಟಿಕ್‌ಗಳಿಗಾಗಿ ಎಕ್ಸ್-ಆಕ್ಸಿಸ್ ಲೀನಿಯರ್ ಮೋಟಾರ್ ಮತ್ತು ಐಆರ್ ಬ್ಲಾಸ್ಟರ್ ಅನ್ನು ಅಳವಡಿಸಲಾಗಿದೆ.

ರೆಡ್ಮಿ K70 ಬೆಲೆ ಮತ್ತು ಲಭ್ಯತೆ
ರೆಡ್ಮಿ K70 ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಅನಾವರಣಗೊಂಡಿದೆ. ಆದರಿಂದ ಇದನ್ನು ಚೀನಾದಲ್ಲಿ 12GB + 256GB ಸ್ಟೋರೇಜ್ ಆಯ್ಕೆಯು CNY 2,499 (ಅಂದಾಜು 29,843ರೂ), 16GB + 256GB ಸ್ಟೋರೇಜ್ ಮಾದರಿಯು CNY 2,699 (ಅಂದಾಜು 31,760ರೂ), 16GB + 512GB ಮಾದರಿಯು CNY 2,999 (ಅಂದಾಜು 35,802ರೂ) ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕಪ್ಪು, ಗ್ಲೇಸಿಯರ್ ಸಿಲ್ವರ್, ಬ್ಯಾಂಬೂ ಮೂನ್ ಬ್ಲೂ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








