Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ರೆಡ್ಮಿ K70e ಫೋನಿನ ಫೀಚರ್ಸ್‌ ಬಹಿರಂಗ! ಬೆಟ್ಟದಷ್ಟು ನಿರೀಕ್ಷೆ!

ಶಿಯೋಮಿ ಕಂಪೆನಿ ತನ್ನ ರೆಡ್ಮಿ ಬ್ರ್ಯಾಂಡ್‌ ಅಡಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಹೊಸ ರೆಡ್ಮಿ K70e ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಇದರ ಫೀಚರ್ಸ್‌ ಬಹಿರಂಗವಾಗಿದ್ದು, ಮೊಬೈಲ್‌ ಪ್ರಿಯರು ಯೋಚಿಸುವಂತೆ ಮಾಡಿದೆ.

ಹೌದು, ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ರೆಡ್ಮಿ K70e ಸ್ಮಾರ್ಟ್‌ಫೋನ್‌ ಮತ್ತೊಂದು ಉತ್ತಮ ಆಯ್ಕೆಯಾಗುವ ನಿರೀಕ್ಷೆಯಿದೆ. ಲಾಂಚ್‌ಗೂ ಮುನ್ನವೇ ಇದರ ಫೀಚರ್ಸ್‌ ಬಹಿರಂಗವಾಗಿರುವುದರಿಂದ ಟೆಕ್‌ ವಲಯದಲ್ಲಿ ಹೊಸ ಸಂಚಲನ ಕ್ರಿಯೆಟ್‌ ಆಗಿದೆ. ತನ್ನ ವಿಭಿನ್ನ ಡಿಸೈನ್‌ ಹಾಗೂ ಪ್ಯಾನಲ್‌ ಲುಕ್‌ನಿಂದ ಇನ್ನಷ್ಟು ಸದ್ದು ಮಾಡುವ ಸೂಚನೆ ನೀಡಿದೆ. ಹಾಗಾದ್ರೆ ರೆಡ್ಮಿ K70e ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಎಂಟ್ರಿ ನೀಡಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ರೆಡ್ಮಿ K70e ಫೋನ್‌ ಫೀಚರ್ಸ್‌ ಬಹಿರಂಗ!

ರೆಡ್ಮಿ K70e ಫೀಚರ್ಸ್‌ ಹೇಗಿದೆ?
ರೆಡ್ಮಿ K70e ಸ್ಮಾರ್ಟ್‌ಫೋನ್‌ 6.73 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 521 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದರೊಂದಿಗೆ ಡಿಸ್‌ಪ್ಲೇ HDR10+, 1800 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌, AI ಡಿಸ್ಪ್ಲೇ, ಐ ಪ್ರೊಟೆಕ್ಷನ್ ಮೋಡ್, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ರೆಡ್ಮಿ K70e ಪ್ರೊಸೆಸರ್‌ ಯಾವುದು?
ರೆಡ್ಮಿ K70e ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9300SoC ಪ್ರೊಸೆಸರ್‌ ನಲ್ಲಿ ಬರುವ ಸಾಧ್ಯತೆಯಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಲಾಗಿದೆ.

ಬಿಡುಗಡೆಗೂ ಮುನ್ನವೇ ರೆಡ್ಮಿ K70e ಫೋನ್‌ ಫೀಚರ್ಸ್‌ ಬಹಿರಂಗ!

ರೆಡ್ಮಿ K70e ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ರೆಡ್ಮಿ K70e ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108  ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಹೊಂದಿರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯಿದೆ.

ರೆಡ್ಮಿ K70e ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ K70e ಸ್ಮಾರ್ಟ್‌ಫೋನ್‌ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಿದೆ. ಇದು 90W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬಿಡುಗಡೆಗೂ ಮುನ್ನವೇ ರೆಡ್ಮಿ K70e ಫೋನ್‌ ಫೀಚರ್ಸ್‌ ಬಹಿರಂಗ!

ರೆಡ್ಮಿ K70e ಬೆಲೆ ಮತ್ತು ಲಭ್ಯತೆ
ರೆಡ್ಮಿ K70e ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗುವ ನಿರೀಕ್ಷೆ ಇಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗಬಹುದು ಎನ್ನಲಾಗಿದೆ. ಆದರೆ ಇದರ ಬೆಲೆ ಹಾಗೂ ಲಭ್ಯತೆಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಬಹಿರಂಗವಾಗಿಲ್ಲ.

ಇನ್ನು ರೆಡ್ಮಿ ಬ್ರ್ಯಾಂಡ್‌ನ ರೆಡ್ಮಿ 13C ಸ್ಮಾರ್ಟ್‌ಫೋನ್‌ ಬಿಡುಗಡೆಯ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆ ಗರಿಗೆದರಿದೆ. ಈ ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1650 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಇದು 269 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದ್ದು, 500 ನೀಟ್ಸ್‌ ಬ್ರೈಟ್‌ನೆಸ್‌ ನೀಡಲಿದೆ ಎನ್ನಲಾಗಿದೆ. ಜೊತೆಗೆ 90 Hz ರಿಫ್ರೆಶ್ ರೇಟ್‌ ಹಾಗೂ 120 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Redmi K70e may launch with 90W fast charging: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+