Home
ಸುದ್ದಿಜಾಲ

ರೆಡ್ಮಿ K70E ಎಂಟ್ರಿಗೆ ಟೆಕ್‌ ವಲಯವೇ ಕಂಗಾಲು! ಸ್ಟೈಲಿಶ್‌ ಲುಕ್‌, ಜಬರ್ದಸ್ತ್‌ ಫೀಚರ್ಸ್‌!

ರೆಡ್ಮಿ K70 ಸರಣಿಯಲ್ಲಿ K70 ಸ್ಮಾರ್ಟ್‌ಫೋನ್‌ ಜೊತೆಗೆ ರೆಡ್ಮಿ K70E ಸ್ಮಾರ್ಟ್‌ಫೋನ್ ಕೂಡ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಸಾಕಷ್ಟು ವಿಬಿನ್ನವಾದ ಡಿಸೈನ್‌ನೊಂದಿಗೆ ಗಮನಸೆಳೆದಿದೆ. ಇದು 6.67 ಇಂಚಿನ 1.5K OLED ಡಿಸ್‌ಪ್ಲೇಯನ್ನು ಹೊಂದಿದ್ದು, 1800 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಇದರೊಂದಿಗೆ ಡಾಲ್ಬಿ ವಿಷನ್‌ಗೆ ಬೆಂಬಲವನ್ನು ಹೊಂದಿದೆ.

ಹೌದು, ರೆಡ್ಮಿ K70E ಸ್ಮಾರ್ಟ್‌ಫೋನ್‌ ಸಖತ್‌ ಸ್ಟೈಲಿಶ್‌ ಲುಕ್‌ನೊಂದಿಗೆ ಎಂಟ್ರಿ ನೀಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8300 ಅಲ್ಟ್ರಾ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದಲ್ಲದೆ 90W ವೇಗದ ಚಾರ್ಜಿಂಗ್‌ ಬೆಂಬಲಿಸುವ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K70E ಎಂಟ್ರಿಗೆ ಟೆಕ್‌ ವಲಯವೇ ಕಂಗಾಲು! ಜಬರ್ದಸ್ತ್‌ ಫೀಚರ್ಸ್‌!

ರೆಡ್ಮಿ K70E ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ ಹೇಗಿದೆ?
ರೆಡ್ಮಿ K70E ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2712 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 1920Hz ತ್ವರಿತ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದ್ದು, 3840Hz PWM ಹೈ-ಫ್ರೀಕ್ವೆನ್ಸಿ ಡಿಮ್ಮಿಂಗ್ ಅನ್ನು ನೀಡಲಿದೆ.

ರೆಡ್ಮಿ K70E ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ರೆಡ್ಮಿ K70E ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8300-ಅಲ್ಟ್ರಾ 4nm ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು HyperOS-ಆಧಾರಿತ ಆಂಡ್ರಾಯ್ಡ್‌ 14 OS ಅನ್ನು ಬಾಕ್ಸ್‌ನಲ್ಲಿ ರನ್‌ ಆಗಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ರೆಡ್ಮಿ K70E ಎಂಟ್ರಿಗೆ ಟೆಕ್‌ ವಲಯವೇ ಕಂಗಾಲು! ಜಬರ್ದಸ್ತ್‌ ಫೀಚರ್ಸ್‌!

ರೆಡ್ಮಿ K70E ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌
ರೆಡ್ಮಿ K70E ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಈ ಕ್ಯಾಮೆರಾ 4K ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ K70E ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ರೆಡ್ಮಿ K70E ಸ್ಮಾರ್ಟ್‌ಫೋನ್‌ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 90W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-ಸಿ ಆಡಿಯೋ, ಹೈ-ರೆಸ್ ಆಡಿಯೋ, ಸ್ಟೀರಿಯೋ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, 5G, ಡ್ಯುಯಲ್ 4G VoLTE, ವೈಫೈ, ಬ್ಲೂಟೂತ್ 5.4 ಅನ್ನು ಬೆಂಬಲಿಸಲಿದೆ.

ರೆಡ್ಮಿ K70E ಎಂಟ್ರಿಗೆ ಟೆಕ್‌ ವಲಯವೇ ಕಂಗಾಲು! ಜಬರ್ದಸ್ತ್‌ ಫೀಚರ್ಸ್‌!

ರೆಡ್ಮಿ K70E ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ
ರೆಡ್ಮಿ K70E ಸ್ಮಾರ್ಟ್‌ಫೋನ್‌ 12GB + 256GB ಸ್ಟೋರೇಜ್‌ ಆಯ್ಕೆಯು 1999 ಯುವಾನ್ (ಅಂದಾಜು 23,520ರೂ) ಬೆಲೆಯನ್ನು ಹೊಂದಿದೆ. ಇನ್ನು 12GB + 256GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯ ಬೆಲೆ 2199 ಯುವಾನ್ (ಅಂದಾಜು 25,875ರೂ)ಬೆಲೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Redmi K70E with 5500mAh battery Launched: Full Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+