Just In
- 4 hrs ago Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- 5 hrs ago ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- 6 hrs ago Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- 7 hrs ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
Don't Miss
- News ಹಾಸನ ಪೆನ್ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಹಿಳಾ ಆಯೋಗ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ರೆಡ್ಮಿ ನೋಟ್ 10 ಫೋನಿನ ಫಸ್ಟ್ ಸೇಲ್!..ಬಜೆಟ್ ಪ್ರೈಸ್ಟ್ಯಾಗ್!
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ ಆಕರ್ಷಕ ಫೀಚರ್ಸ್ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ 4GB RAM + 64GB ಸ್ಟೋರೇಜ್ನ ವೇರಿಯಂಟ್ ಬೆಲೆಯು 11,999ರೂ.ಗಳು ಆಗಿದೆ.
ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ ಮೊದಲ ಮಾರಾಟ ಇಂದು (ಮಾರ್ಚ್.16) ನಡೆಯಲಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹಾಗೂ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB + 128GB ಆಗಿವೆ. ಆಕ್ವಾ ಗ್ರೀನ್, ವೈಟ್ ಫಾರೇಸ್ಟ್ ಮತ್ತು ಶಾಡೋ ಬ್ಲ್ಯಾಕ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ ನೋಟ್ 10 ಫೋನಿನ ಫೀಚರ್ಸ್ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್ನೆಸ್ 1100 ನಿಟ್ಗಳವರೆಗೆ ಇರಲಿದೆ. ಇನ್ನು ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ.
ಪ್ರೊಸೆಸರ್ ಯಾವುದು
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 678 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದ್ದು, ಫೋನ್ ಆಕ್ವಾ ಗ್ರೀನ್, ಫ್ರಾಸ್ಟ್ ವೈಟ್ ಮತ್ತು ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್ಫೋನ್ ಇಂದು ಅಮೆಜಾನ್, ಮಿ.ಕಾಮ್, ಮಿ ಹೋಮ್ ಸ್ಟೋರ್ಗಳು ಮತ್ತು ಆಫ್ಲೈನ್ ಚಿಲ್ಲರೆ ಪಾಲುದಾರರ ಮೂಲಕ ದೇಶದಲ್ಲಿ ಮಾರಾಟವಾಗಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999