Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ ನೋಟ್‌ 10 ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಬಹು ನಿರೀಕ್ಷಿತ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಸರಣಿ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯಲ್ಲಿ ರೆಡ್ಮಿ ನೋಟ್ 10, ರೆಡ್ಮಿ ನೋಟ್‌ 10 ಪ್ರೊ, ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಲಾಗಿದೆ. ಇನ್ನು ರೆಡ್‌ಮಿ ನೋಟ್ 10 ಸರಣಿಯು ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸರಣಿಯ ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಎರಡೂ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಯನ್ನು ಹೊಂದಿವೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ರೆಡ್ಮಿ ನೋಟ್‌ 10 ಸ್ಮಾರ್ಟ್‌ಫೋನ್‌ ಸರಣಿಯನ್ನು ಪರಿಚಯಿಸಿದೆ. ಇನ್ನು ರೆಡ್ಮಿ ನೋಟ್ 10 ಸರಣಿಯು 33W ವೇಗದ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ ಮತ್ತು ಭವಿಷ್ಯದ ಸಾಫ್ಟ್‌ವೇರ್ ಅಪ್ಡೇಟ್‌ ಮೂಲಕ MIUI 12.5 ಗೆ ಅಪ್ಡೇಟ್‌ ಮಾಡಬಹುದಾಗಿದೆ. ಈ ಹೊಸ ಸರಣಿಯಲ್ಲಿ ರೆಡ್ಮಿ ನೋಟ್ 10 ಆಕರ್ಷಕ ಫಿಚರ್ಸ್‌ಗಳನ್ನು ಪಡೆದುಕೊಂಡಿದ್ದು, 60Hz ರಿಫ್ರೆಶ್ ರೇಟ್‌ ಮತ್ತು 48 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ. ಹಾಗಾದ್ರೆ ರೆಡ್ಮಿ ನೋಟ್‌ 10 ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದ್ದು, ಫೋನ್ ಆಕ್ವಾ ಗ್ರೀನ್, ಫ್ರಾಸ್ಟ್ ವೈಟ್ ಮತ್ತು ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಾರ್ಚ್ 16 ರ ಮಂಗಳವಾರದಿಂದ ರೆಡ್ಮಿ ನೋಟ್ 10 ಅಮೆಜಾನ್, ಮಿ.ಕಾಮ್, ಮಿ ಹೋಮ್ ಸ್ಟೋರ್‌ಗಳು ಮತ್ತು ಆಫ್‌ಲೈನ್ ಚಿಲ್ಲರೆ ಪಾಲುದಾರರ ಮೂಲಕ ದೇಶದಲ್ಲಿ ಮಾರಾಟವಾಗಲಿದೆ.

Best Mobiles in India

English summary
Redmi Note 10, Redmi Note 10 Pro, and the Redmi Note 10 Pro Max were launched in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+