ಭಾರತದಲ್ಲಿ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶಿಯೋಮಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ರೆಡ್ಮಿ ಬ್ರಾಂಡ್ ಅಡಿಯಲ್ಲಿ ಹೊಸ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಬಿಡುಗಡೆ ಮಾಡಲಾದ ರೆಡ್ಮಿ ನೋಟ್ 9 ಪ್ರೋ ಸ್ಮಾರ್ಟ್‌ಫೋನ್‌ನ ರೀಬ್ಯಾಡ್ ವರ್ಷನ್ ಆಗಿದೆ.

ಹೌದು, ಶಿಯೋಮಿ ಕಂಪೆನಿ ಹೊಸ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್ ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಐಪಿಎಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಜೊತೆಗೆ ರೀಡಿಂಗ್ ಮೋಡ್ 2.0, ಮತ್ತು ಟಿಯುವಿ ರೀನ್ಲ್ಯಾಂಡ್ ಲೋ ಬ್ಲೂ ಲೈಟ್ ಸರ್ಟಿಫಿಕೇಶನ್ ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಹಾಗೂ 6GB RAM ಮತ್ತು 128GB ವರೆಗೆ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸರ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10 ಲೈಟ್ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G VoLTE, Wi-Fi 802.11ac, ಬ್ಲೂಟೂತ್ v5.0, GPS/A-GPS, NavIC, USB Type-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು AI ಫೇಸ್ ಅನ್‌ಲಾಕ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ಆಯ್ಕೆಗೆ 13,999 ರೂ. ಹಾಗೂ 4GB RAM + 128GB ಸ್ಟೋರೇಜ್ ಆಯ್ಕೆಗೆ 15,999ರೂ ಬೆಲೆ ಹೊಂದಿದೆ. ಇದಲ್ಲದೆ 6GB RAM + 128GB ಸ್ಟೋರೇಜ್ ಮಾದರಿಗೆ 16,999ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅರೋರಾ ಬ್ಲೂ, ಷಾಂಪೇನ್ ಗೋಲ್ಡ್ ಮತ್ತು ಗ್ಲೇಸಿಯರ್ ವೈಟ್ ಮತ್ತು ಇಂಟರ್‌ಸ್ಟೆಲ್ಲಾರ್ ಬ್ಲಾಕ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದು Mi.com ಮತ್ತು Amazon.in ನಲ್ಲಿ ಅಕ್ಟೋಬರ್ 2 ರಿಂದ ಸೇಲ್ ಆಗಲಿದೆ. ಇನ್ನು ಲಾಂಚ್ ಆಫರ್ ನಲ್ಲಿ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ನಲ್ಲಿ ಖರೀದಿ ಮಾರುವವರಿಗೆ 1,250 ರೂ ರಿಯಾಯಿತಿ ಸಿಗಲಿದೆ.


Click it and Unblock the Notifications








