ಶಿಯೋಮಿಯ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಹೆಚ್ಚಳ!

|

ಜನಪ್ರಿಯ ಶಿಯೋಮಿ ಮೊಬೈಲ್ ಕಂಪನಿಯು ಹಲವು ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿದೆ. ಅವುಗಳಲ್ಲಿ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿದ್ದ, ಬಜೆಟ್ ಬೆಲೆಯ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಭಿನ್ನ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಇದೀಗ ಶಿಯೋಮಿಯು ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಿದೆ. ಇದೇ ವಾರದಲ್ಲಿ ಈಗಾಗಲೇ ಒಮ್ಮೆ ಬೆಲೆ ಏರಿಕೆ ಕಂಡಿದೆ.

ಸಂಸ್ಥೆಯು

ಹೌದು, ಶಿಯೋಮಿ ಮೊಬೈಲ್ ಕಂಪನಿ ಸಂಸ್ಥೆಯು ತನ್ನ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 500ರೂ.ಗಳನ್ನು ಏರಿಕೆ ಮಾಡಿದೆ. ಈ ಫೋನ್ 4GB RAM + 64GB ಮತ್ತು 4GB RAM + 128GB ಸ್ಟೋರೇಜ್‌ ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಈ ಎರಡು ವೇರಿಯಂಟ್‌ಗಳ ಬೆಲೆಯಲ್ಲಿಯೂ ಹೆಚ್ಚಳ ಮಾಡಿದೆ. ದರ ಹೆಚ್ಚಳದಿಂದಾಗಿ 4GB RAM + 64GB ವೇರಿಯಂಟ್ ಫೋನ್ ಈಗ 12,999ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಹಾಗೆಯೇ 6GB RAM/128GB ವೇರಿಯಂಟ್ ದರ ಏರಿಕೆಯಿಂದಾಗಿ 14,999ರೂ.ಗಳ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ರೆಡ್ಮಿ ನೋಟ್ 10 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

Best Mobiles in India

English summary
Redmi Note 10 Price In India Increased For The Second Time In Just a Week.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X