ರೆಡ್ಮಿ ನೋಟ್ 10 ಪ್ರೊ ಬೆಲೆಯಲ್ಲಿ ಇಳಿಕೆ; ಫೋನ್ ಖರೀದಿಸಲು ಫ್ಲ್ಯಾಶ್ ಸೇಲ್‌ಗಾಗಿ ಕಾಯಬೇಕಿಲ್ಲ!
ಶಿಯೋಮಿ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಈಗಾಗಲೇ ಆನ್‌ಲೈನ್ ತಾಣಗಳ ಮೂಲಕ ಫ್ಲ್ಯಾಶ್ ಸೇಲ್ ಕಂಡಿದೆ. ಆದರೆ ಇದೀಗ ಕಂಪನಿಯು ಗ್ರಾಹಕರಿಗೆ ಭಾರೀ ಖುಷಿ ನೀಡಿದ್ದು, ರೆಡ್ಮಿ ನೋಟ್ 10 ಪ್ರೊ ಫೋನ್ ಅನ್ನು ಜನಪ್ರಿಯ ಇ ಕಾಮರ್ಸ್ ತಾಣಗಳಲ್ಲಿ ಓಪೆನ್ ಸೇಲ್‌ನಲ್ಲಿ ಲಭ್ಯ ಮಾಡಿದೆ. ಅಲ್ಲದೇ ಭರ್ಜರಿ ಬೆಲೆ ಕಡಿತವನ್ನು ಘೋಷಿಸಿದೆ.

ಹೌದು, ಜನಪ್ರಿಯ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಇನ್ನು ಪ್ರಮುಖ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಗಳಲ್ಲಿ ಮುಕ್ತವಾಗಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಕಂಪನಿಯು ರೆಡ್ಮಿ ನೋಟ್ 10 ಪ್ರೊ ಫೋನಿನ 6GB + 64GB, 6GB RAM + 128GB ಮತ್ತು 8GB + 128GB ಈ ಮೂರು ವೇರಿಯಂಟ್ ಮಾಡೆಲ್‌ನ ಬೆಲೆಯಲ್ಲಿ 2,000ರೂ.ಗಳ ಇಳಿಕೆ ಮಾಡಿದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್ ಕಾರ್ಯ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.


Click it and Unblock the Notifications








