ಇಂದು ಮತ್ತೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸೇಲ್‌: 108ಎಂಪಿ ಕ್ಯಾಮೆರಾ ಸ್ಪೆಷಲ್!

|

ಶಿಯೋಮಿ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಈಗಾಗಲೇ ಆನ್‌ಲೈನ್ ತಾಣಗಳಲ್ಲಿ ಸೇಲ್ ಕಂಡಿದೆ. ಈ ಸ್ಮಾರ್ಟ್‌ಫೋನ್ ಇಂದು ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮತ್ತೆ ಮಾರಾಟ ಪ್ರಾರಂಭಿಸಿದೆ. ಅಂದಹಾಗೇ 108ಎಂಪಿ ಕ್ಯಾಮೆರಾದ ಈ ಸ್ಮಾರ್ಟ್‌ಫೋನಿನ ಆರಂಭಿಕ 6GB RAM + 64GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 18,999 ರೂ.ಗಳು ಆಗಿದೆ.

ಚಾರ್ಜಿಂಗ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್ ಮಾರಾಟ ಇಂದು (ಏ.8) ಶುರುವಾಗಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 6GB RAM + 64GB, 6GB + 128GB ಮತ್ತು 8GB RAM + 128GB ಆಗಿವೆ. ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಎಸ್ಟ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ ನೋಟ್ 10 ಪ್ರೊ ಮ್ಯಾಕ್ಸ್ 6GB RAM + 64GB ಶೇಖರಣಾ ಮಾದರಿಗೆ 18,999ರೂ. ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆಗೆ 19,999ರೂ ಮತ್ತು 8 GB RAM + 128GB ಶೇಖರಣಾ ರೂಪಾಂತರಕ್ಕೆ 21,999 ರೂ.ಬೆಲೆ ಹೊಂದಿದೆ.

Best Mobiles in India

English summary
Redmi Note 10 Pro Max has a quad camera setup at the back with a 108-megapixel main sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X