Redmi: ರೆಡ್ಮಿಯ ಈ ವಿಶೇಷ ಫೋನ್ ಈಗ ಕೈಗೆಟಕುವ ದರದಲ್ಲಿ! 108 MP ಕ್ಯಾಮೆರಾ... 128 GB ಸ್ಟೋರೇಜ್
ರೆಡ್ಮಿ ಸ್ಮಾರ್ಟ್‌ಫೋನ್‌ಗಳು (Redmi smartphone) ಸುಧಾರಿತ ಫೀಚರ್ಸ್ ಆಯ್ಕೆಯೊಂದಿಗೆ ಬಳಕೆದಾರರಿಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತಿವೆ. ಅದರಲ್ಲೂ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೆಚ್ಚು ಸೇಲ್ ಆಗುವ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್‌ಗಳು ಪ್ರಮುಖವಾಗಿವೆ. ಈ ನಡುವೆ ವಿಶೇಷವಾದ ರೆಡ್ಮಿ ಫೋನ್‌ವೊಂದು ಭಾರೀ ಆಫರ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ (Redmi Note 10 Pro Max smartphone) ನಿಮಗೆ ಈಗ ಆಫರ್ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆಯೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಹಾಗೂ 128 GB ಸ್ಟೋರೇಜ್ ಮೂಲಕ ಉತ್ತಮ ಎನಿಸಿದೆ. ಹಾಗಿದ್ರೆ, ಇದರ ಇತರೆ ಪ್ರಮುಖ ಫೀಚರ್ಸ್ ಹಾಗೂ ಈ ಫೋನ್‌ನ ಆಫರ್ ಬೆಲೆ ಎಷ್ಟು ಎಂಬಿತ್ಯಾದಿ ಮಾಹಿತಿಯನ್ನು ತಿಳಿಸಿಕೊಡಲಾಗಿದೆ ಓದಿರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್‌ನ ಆಫರ್ ಬೆಲೆ ಬಗ್ಗೆ ತಿಳಿಯುವ ಮುನ್ನ ಇದರ ಪ್ರಮುಖ ಫೀಚರ್ಸ್ ಕಡೆ ಕಣ್ಣಾಯಿಸೋಣ. ಅದರಂತೆ ಈ ಫೋನ್ 6.67 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, ಇದು 120Hz ರಿಫ್ರೆಶ್ ರೇಟ್ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೇರಿದಂತೆ ವಿವಿ ಆಕರ್ಷಕ ಸೌಲಭ್ಯ ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದುಕೊಂಡಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಈ ಫೋನ್ ಕ್ವಾಲ್ಕಾಮ್ SM7150 ಸ್ನಾಪ್‌ಡ್ರಾಗನ್ 732G (8 nm) ಪ್ರೊಸೆಸರ್ ಬಲ ಪಡೆದುಕೊಂಡಿದ್ದು, ಅಡ್ರಿನೊ 618 ಜಿಪಿಯು ಶಕ್ತಿಯೊಂದಿಗೆ ಆಂಡ್ರಾಯ್ಡ್ 11 ಓಎಸ್ ಅನ್ನು ಈ ಫೋನ್ ರನ್ ಮಾಡಲಿದೆ. ಇದರೊಂದಿಗೆ 6GB RAM ಹಾಗೂ 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಈ ಫೋನ್ ಇದ್ದು, ಎಸ್‌ಡಿ ಕಾರ್ಡ್ ಬಳಕೆ ಮಾಡುವ ಮೂಲಕ ಸ್ಟೋರೇಜ್ ಅನ್ನು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೂಪರ್ ಟೆಲಿ ಮ್ಯಾಕ್ರೋ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆನ್ಸರ್ ಆಯ್ಕೆ ನೀಡಲಾಗಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5020 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ 30 ನಿಮಿಷದಲ್ಲಿ 60% ವರೆಗೆ ಹಾಗೂ 75 ನಿಮಿಷದಲ್ಲಿ 100% ಚಾರ್ಜಿಂಗ್ ಮಾಡಬಹುದಾಗಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, 3.5 mm ಸಾಕೆಟ್, ಐಆರ್ ಬ್ಲಾಸ್ಟರ್ ಆಯ್ಕೆ ಪಡೆದಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಆಫರ್ ವಿವರ: ಇನ್ನು ಈ ಫೋನ್ ಪ್ರಮುಖ ವಿಚಾರಕ್ಕೆ ಬರುವುದಾದರೆ ಇದು ಫ್ಲಿಪ್‌ಕಾರ್ಟ್‌ನಲ್ಲಿ(Flipkart) 14% ರಿಯಾಯಿತಿಯನ್ನು ಪಡೆಯುವ ಮೂಲಕ 18,820ರೂ.ಗಳಿಗೆ ಖರೀದಿ ಮಾಡಲು ಲಭ್ಯ ಇದೆ. ಇದರ ಸಾಮಾನ್ಯ ದರ 21,999ರೂ.ಗಳಾಗಿದೆ. ಅದಾಗ್ಯೂ ನೀವು ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬೇಕು ಎಂದುಕೊಂಡರೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆ ಮಾಡಬಹುದು.

ಇಷ್ಟೇ ಅಲ್ಲದೆ ಪಾರ್ಟನರ್ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಆಯ್ಕೆ ಮೂಲಕ ಖರೀದಿ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ನೀವು ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ ಒಮ್ಮೆಲೆ ಇಷ್ಟು ಹಣ ನೀಡಿ ಖರೀದಿ ಮಾಡಲು ಆಗುವುದಿಲ್ಲ ಎಂದರೆ ತಿಂಗಳಿಗೆ 1,166 ರೂ.ಗಳನ್ನು ಪಾವತಿ ಮಾಡುವ ಮೂಲಕ ಈ ಫೋನ್ ಖರೀದಿ ಮಾಡಬಹುದಾಗಿದೆ.


Click it and Unblock the Notifications








