Home
ಸುದ್ದಿಜಾಲ

ಅಗ್ಗದ ದರದ ಈ ಎರಡು ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ದಿಢೀರ್ ಏರಿಕೆ!

ಪ್ರಸ್ತುತ ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ವಾತಾವರಣ ಇದ್ದು, ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಸರ್ಕಸ್ ಮಾಡುತ್ತಿವೆ. ಮುಖ್ಯವಾಗಿ ಬಜೆಟ್‌ ಪ್ರೈಸ್‌ನಲ್ಲಿ ಆಕರ್ಷಕ ಫೀಚರ್ಸ್‌ಗಳಿರುವ ಫೋನ್‌ ಲಾಂಚ್ ಮಾಡುತ್ತಿವೆ. ಅದಾಗ್ಯೂ ಕೆಲವು ಕಂಪನಿಗಳ ಸ್ಮಾರ್ಟ್‌ಫೋನ್‌ಗಳು ಮಾತ್ರ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿ ಆಗುತ್ತವೆ. ಹೀಗೆ ಗ್ರಾಹಕರನ್ನು ಆಕರ್ಷಿಸಿರುವ ಇತ್ತೀಚಿಗಿನ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ಏರಿಕೆ ಕಂಡು ಬಂದಿದೆ.

ಮೊಟೊರೊಲಾ

ಹೌದು, ಶಿಯೋಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಪ್ರೊ ಮತ್ತು ಮೊಟೊರೊಲಾ ಕಂಪನಿಯ ನೂತನ ಮೊಟೊ G40 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಏರಿಕೆ ಆಗಿದೆ. ರೆಡ್ಮಿ ನೋಟ್ 10 ಪ್ರೊ ಫೋನಿನ ದರದಲ್ಲಿ 500ರೂ.ಗಳ ಏರಿಕೆ ಕಂಡಿದ್ದು, ಅದೇ ರೀತಿ ಮೊಟೊ G40 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 499ರೂ.ಗಳ ಏರಿಕೆ ಆಗಿದೆ.

ವೇರಿಯಂಟ್‌

ಬೆಲೆ ಏರಿಕೆ ನಂತರ ರೆಡ್ಮಿ ನೋಟ್ 10 ಪ್ರೊ ಫೋನಿನ 6GB+128GB ಸ್ಟೋರೇಜ್ ವೇರಿಯಂಟ್‌ ಬೆಲೆಯು 17,499ರೂ. ಆಗಿದೆ. ಇನ್ನು ಮೊಟೊ G40 ಸ್ಮಾರ್ಟ್‌ಫೋನ್ 4GB+64GB ವೇರಿಯಂಟ್‌ ಬೆಲೆಯು 14,499ರೂ. ಆಗಿದ್ದು, 6GB+128GB ಸ್ಟೋರೇಜ್ ವೇರಿಯಂಟ್ ದರವು 16,499ರೂ. ಆಗಿದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಮತ್ತು ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್ ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ-ಡಿಸ್‌ಪ್ಲೇ

ರೆಡ್ಮಿ ನೋಟ್ 10 ಪ್ರೊ-ಡಿಸ್‌ಪ್ಲೇ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ-ಪ್ರೊಸೆಸರ್‌

ರೆಡ್ಮಿ ನೋಟ್ 10 ಪ್ರೊ-ಪ್ರೊಸೆಸರ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌

ರೆಡ್ಮಿ ನೋಟ್ 10 ಪ್ರೊ- ಕ್ಯಾಮೆರಾ

ರೆಡ್ಮಿ ನೋಟ್ 10 ಪ್ರೊ- ಕ್ಯಾಮೆರಾ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ- ಬ್ಯಾಟರಿ

ರೆಡ್ಮಿ ನೋಟ್ 10 ಪ್ರೊ- ಬ್ಯಾಟರಿ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

ಮೊಟೊ G40 ಫ್ಯೂಷನ್- ಡಿಸ್‌ಪ್ಲೇ

ಮೊಟೊ G40 ಫ್ಯೂಷನ್- ಡಿಸ್‌ಪ್ಲೇ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 1080x2460 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.8 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡಿಸ್‌ಪ್ಲೇಯು HDR10 ಸಪೋರ್ಟ್‌ ಸಹ ಪಡೆದಿದೆ.

ಮೊಟೊ G40 ಫ್ಯೂಷನ್- ಪ್ರೊಸೆಸರ್‌

ಮೊಟೊ G40 ಫ್ಯೂಷನ್- ಪ್ರೊಸೆಸರ್‌

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ.

ಮೊಟೊ G40 ಫ್ಯೂಷನ್- ಕ್ಯಾಮೆರಾ

ಮೊಟೊ G40 ಫ್ಯೂಷನ್- ಕ್ಯಾಮೆರಾ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 16 ಎಂಪಿ ಸೆನ್ಸಾರ್‌ನಲ್ಲಿದೆ.

ಮೊಟೊ G40 ಫ್ಯೂಷನ್- ಬ್ಯಾಟರಿ

ಮೊಟೊ G40 ಫ್ಯೂಷನ್- ಬ್ಯಾಟರಿ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.

Best Mobiles in India

English summary
Redmi Note 10 Pro has been hiked by Rs 500. Moto G40 Fusion too has gotten more expensive in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+