ಸ್ಮಾರ್ಟ್‌ಫೋನ್ ಪ್ರಿಯರೇ ಗಮನಿಸಿ; ರೆಡ್ಮಿ ಕಂಪನಿಯ ಈ ಅಗ್ಗದ ಮಾಡೆಲ್ ಇನ್ನು ಸಿಗಲ್ಲ!
ಜನಪ್ರಿಯ ಶಿಯೋಮಿ ಕಂಪನಿಯು ಹಲವು ಬಜೆಟ್ ದರದ ಫೋನ್‌ಗಳನ್ನು ಲಾಂಚ್ ಮಾಡಿ ಗ್ರಾಹಕರನ್ನು ಸೆಳೆದಿದೆ. ಅವುಗಳಲ್ಲಿ ರೆಡ್ಮಿ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿವೆ. ರೆಡ್ಮಿ ನೋಟ್ ಸರಣಿಯಲ್ಲಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಮಾಡೆಲ್‌ಗಳು ಮಾರುಕಟ್ಟೆಯಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಭಾರಿ ಸದ್ದು ಮಾಡುತ್ತಿವೆ. ಆದ್ರೆ ಈಗ ಗ್ರಾಹಕರಿಗೆ ಅಚ್ಚರಿಯ ಸುದ್ದಿ ಹೊರಹಾಕಿದೆ.

ಹೌದು, ಶಿಯೋಮಿ ಕಂಪನಿಯು ತನ್ನ ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್‌ಗಳ 6GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಸ್ಥಗಿತಗೊಳಿಸಿದಂತೆ ಕಾಣುತ್ತಿದೆ. ಈ ಎರಡೂ ಫೋನ್‌ಗಳ ಬೇಸ್ ಸ್ಟೋರೇಜ್ ಕಾನ್ಫಿಗರೇಶನ್ ಅನ್ನು ಇನ್ನು ಮುಂದೆ ಕಂಪನಿಯ ವೆಬ್‌ಸೈಟ್‌ನಲ್ಲಿ ಲಿಸ್ಟ್‌ನಲ್ಲಿ ಕಾಣಿಸಲಾಗುವುದಿಲ್ಲ, ಹಾಗೆಯೇ ಇನ್ನು ಮುಂದೆ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವುದಿಲ್ಲ ಎಂದು ಸುಳಿವು ನೀಡಿದೆ.

ಶಿಯೋಮಿಯ ಅಧಿಕೃತ Mi.com ಇನ್ನು ಮುಂದೆ ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್‌ಗಳ 6GB + 64GB ವೇರಿಯಂಟ್ ಆಯ್ಕೆಯನ್ನು ಪಟ್ಟಿ ಮಾಡುವುದಿಲ್ಲ. ಅದೇ ರೀತಿ ಅಮೆಜಾನ್ ಕೂಡ ಇನ್ನು ಮುಂದೆ ಎರಡೂ ಫೋನ್‌ಗಳಿಗೆ ಬೇಸ್ ಕಾನ್ಫಿಗರೇಶನ್ ಅನ್ನು ಪಟ್ಟಿ ಮಾಡುವುದಿಲ್ಲ. ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಪ್ರಸ್ತುತ 6GB + 128GB ಸಂಗ್ರಹಣೆ ಮತ್ತು 8GB + 128GB ಸಂಗ್ರಹ ಆಯ್ಕೆಗಳಲ್ಲಿ ಪಟ್ಟಿ ಮಾಡಲಾಗಿದೆ. ಇವುಗಳ ಬೆಲೆಗಳು ಕ್ರಮವಾಗಿ 19,999ರೂ. ಮತ್ತು 21,999ರೂ. ಆಗಿದೆ. ಈ ಫೋನ್ ಡಾರ್ಕ್ ನೈಟ್, ಗ್ಲೇಶಿಯಲ್ ಬ್ಲೂ ಮತ್ತು ವಿಂಟೇಜ್ ಕಾಪರ್ ಬಣ್ಣಗಳಲ್ಲಿ ಲಭ್ಯವಿದೆ.

ಹಾಗೆಯೇ ರೆಡ್ಮಿ ನೋಟ್ 10 ಪ್ರೊ ಸದ್ಯ 6GB + 128GB ಸ್ಟೋರೇಜ್ ಮತ್ತು 8GB + 128GB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಮಾದರಿಗಳ ಬೆಲೆಗಳು ಕ್ರಮವಾಗಿ 17,999ರೂ. ಮತ್ತು 18,999ರೂ. ಆಗಿದೆ. ಈ ಫೋನ್ ಡಾರ್ಕ್ ನೈಟ್, ಗ್ಲೇಶಿಯಲ್ ಬ್ಲೂ ಮತ್ತು ವಿಂಟೇಜ್ ಕಾಪರ್ ಬಣ್ಣಗಳಲ್ಲಿ ಲಭ್ಯವಿದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್‌ಗಳ ಫೀಚರ್ಸ್‌ಗಳ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ ಡಿಸ್‌ಪ್ಲೇ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ ಪ್ರೊಸೆಸರ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಆಗಿವೆ.

ರೆಡ್ಮಿ ನೋಟ್ 10 ಪ್ರೊ ಕ್ಯಾಮೆರಾ
ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಬ್ಯಾಟರಿ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಡಿಸ್‌ಪ್ಲೇ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಪ್ರೊಸೆಸರ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಎಸ್ಟ್‌ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಕ್ಯಾಮೆರಾ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಬ್ಯಾಟರಿ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.


Click it and Unblock the Notifications








