ಬಹು ನಿರೀಕ್ಷಿತ ರೆಡ್ಮಿ ನೋಟ್‌ 10 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! 108MP ಕ್ಯಾಮೆರಾ ವಿಶೇಷ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ರೆಡ್ಮಿ ನೋಟ್‌ 10 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್‌ 10, ರೆಡ್ಮಿ ನೋಟ್‌ ಪ್ರೊ, ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಅನ್ನು ಸ್ಮಾರ್ಟ್‌ಫೋನ್‌ ಸೇರಿವೆ. ಸದ್ಯ ಭಾರತದಲ್ಲಿ ಬಿಡುಗಡೆ ಆಗಿರುವ ಈ ಸ್ಮಾರ್ಟ್‌ಫೋನ್‌ ಸರಣಿ ಸಾಕಷ್ಟು ಸಂಚಲನ ಮೂಡಿಸಿದೆ. ಇನ್ನು ಈ ಸರಣಿಯ ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 108 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಕ್ಯಾಮೆರಾವನ್ನು ಒಳಗೊಂಡಿದೆ.

ಶಿಯೋಮಿ

ಹೌದು, ಶಿಯೋಮಿ ತನ್ನ ಬಹು ನಿರೀಕ್ಷಿತ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಸರಣಿಯನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಸರಣಿಯ ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಎರಡೂ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಯನ್ನು ಹೊಂದಿವೆ. ಅಲ್ಲದೆ ಭವಿಷ್ಯದ ಸಾಫ್ಟ್‌ವೇರ್ ಅಪ್ಡೇಟ್‌ ಮೂಲಕ MIUI 12.5 ಗೆ ಅಪ್ಡೇಟ್‌ ಮಾಡಬಹುದಾಗಿದೆ. ಹಾಗಾದ್ರೆ ರೆಡ್ಮಿ ನೋಟ್‌ 10 ಪ್ರೊ ಮತ್ತು ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳೇನು? ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 732G ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌, ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಅನ್ನೊ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿ ನೈಟ್ ಮೋಡ್ 2.0, ವಿಎಲ್ಒಜಿ ಮೋಡ್, ಮ್ಯಾಜಿಕ್ ಕ್ಲೋನ್ ಮೋಡ್, ಲಾಂಗ್ ಎಕ್ಸ್‌ಪೋಸರ್ ಮೋಡ್, ವಿಡಿಯೋ ಪ್ರೊ ಮೋಡ್ ಮತ್ತು ಡ್ಯುಯಲ್ ವಿಡಿಯೋ ಸೇರಿವೆ. ಇದು 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ ನೋಟ್ 10 ಪ್ರೊ 6GB RAM + 64GB ಶೇಖರಣಾ ಮಾದರಿಗೆ 15,999 ರೂ. ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆಗೆ 16,999 ರೂ ಮತ್ತು 8 GB RAM + 128GB ಶೇಖರಣಾ ರೂಪಾಂತರಕ್ಕೆ 18,999 ರೂ.ಬೆಲೆ ಹೊಂದಿದೆ. ಅಲ್ಲದೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ 6GB RAM+ 64GB ಶೇಖರಣಾ ರೂಪಾಂತರಕ್ಕೆ 18,999 ರೂ. 6GB RAM + 128GB ಸಂಗ್ರಹಕ್ಕೆ 19,999, ಮತ್ತು 8GB RAM+ 128GB ಶೇಖರಣಾ ಮಾದರಿಗೆ 21,999 ರೂ. ಬೆಲೆ ಹೊಂದಿದೆ. ರೆಡ್ಮಿ ನೋಟ್ 10 ಪ್ರೊ ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಎರಡೂ ಡಾರ್ಕ್ ನೈಟ್, ಗ್ಲೇಶಿಯಲ್ ಬ್ಲೂ ಮತ್ತು ವಿಂಟೇಜ್ ಕಂಚಿನ ಬಣ್ಣಗಳಲ್ಲಿ ಬರುತ್ತವೆ. ಇನ್ನು ರೆಡ್ಮಿ ನೋಟ್‌ 10 ಪ್ರೊ ಮಾರ್ಚ್ 17ಕ್ಕೆ ಸೇಲ್‌ ಆದರೆ, ಮಾರ್ಚ್ 18ಕ್ಕೆ ರೆಡ್‌ಮಿ ನೋಟ್ 10 ಪ್ರೊ ಮ್ಯಾಕ್ಸ್ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Redmi Note 10 series has been launched in India with price starting at Rs 11,999. Three models under the series include the Redmi Note 10, the Redmi Note 10 Pro and the Redmi Note 10 Pro.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X