ಇಂದು ಮತ್ತೆ ರೆಡ್ಮಿ ನೋಟ್ 10 ಪ್ರೊ ಫೋನ್ ಸೇಲ್: ಫೀಚರ್ಸ್ ಏನು?..ಬೆಲೆ ಎಷ್ಟು?
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ರಿಂದ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮತ್ತೆ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 6GB RAM + 64GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 15,999ರೂ.ಗಳು ಆಗಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಮಾರಾಟ ಇಂದು (ಏ.7) ನಡೆಯಲಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹಾಗೂ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 6GB RAM + 64GB ಮತ್ತು 6GB + 128GB ಆಗಿವೆ. ಡಾರ್ಕ್ ನೈಟ್, ಗ್ಲಾಸಿಲ್ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.

ಪ್ರೊಸೆಸರ್ ಕಾರ್ಯ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್‌ಮಿ ನೋಟ್ 10 ಪ್ರೊ 6GB RAM + 64GB ಶೇಖರಣಾ ಮಾದರಿಗೆ 15,999 ರೂ. ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆಗೆ 16,999 ರೂ ಮತ್ತು 8 GB RAM + 128GB ಶೇಖರಣಾ ರೂಪಾಂತರಕ್ಕೆ 18,999 ರೂ.ಬೆಲೆ ಹೊಂದಿದೆ.


Click it and Unblock the Notifications