Home
ಸುದ್ದಿಜಾಲ

ಇಂದು ಮತ್ತೆ ರೆಡ್ಮಿ ನೋಟ್ 10 ಫೋನಿನ ಸೇಲ್‌!..ಆಕರ್ಷಕ ಪ್ರೈಸ್‌ಟ್ಯಾಗ್‌!

ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಈಗಾಗಲೇ ಆನ್‌ಲೈನ್‌ ತಾಣಗಳಲ್ಲಿ ಮಾರಾಟ ಕಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮತ್ತೆ ಈ ಸ್ಮಾರ್ಟ್‌ಫೋನಿನ ಸೇಲ್ ಇಂದು ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 4GB RAM + 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 11,999ರೂ.ಗಳು ಆಗಿದೆ.

ಫಾಸ್ಟ್‌

ಹೌದು, ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಏ.6) ನಡೆಯಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB + 128GB ಆಗಿವೆ. ಆಕ್ವಾ ಗ್ರೀನ್, ವೈಟ್‌ ಫಾರೇಸ್ಟ್ ಮತ್ತು ಶಾಡೋ ಬ್ಲ್ಯಾಕ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ ನೋಟ್ 10 ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಇದು 100% ಡಿಸಿಐ-ಪಿ 3 ಅನ್ನು ಹೊಂದಿದೆ. ವಿಶಾಲ ಬಣ್ಣದ ಹರವು, ಮತ್ತು ಗರಿಷ್ಠ ಬ್ರೈಟ್‌ನೆಸ್‌ 1100 ನಿಟ್‌ಗಳವರೆಗೆ ಇರಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರೆಡ್‌ಮಿ ನೋಟ್ 10 ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದ್ದು, ಫೋನ್ ಆಕ್ವಾ ಗ್ರೀನ್, ಫ್ರಾಸ್ಟ್ ವೈಟ್ ಮತ್ತು ಶ್ಯಾಡೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂದು ಅಮೆಜಾನ್, ಮಿ.ಕಾಮ್ ತಾಣಗಳ ಮೂಲಕ ದೇಶದಲ್ಲಿ ಮಾರಾಟವಾಗಲಿದೆ.

Best Mobiles in India

English summary
Redmi Note 10 Sale Today Via Amazon: Price And Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+