ಭಾರತದಲ್ಲಿ ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಜನಪ್ರಿಯ ಶಿಯೋಮಿ ಕಂಪೆನಿ ತನ್ನ ರೆಡ್‌ಮಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಸದ್ಯ ತನ್ನ ಹೊಸ ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ ಬಿಡುಗಡೆಗೆ ಡೇಟ್ ಫಿಕ್ಸ್ ಮಾಡಿದೆ. ಇದೇ ಮೇ 13 ರಂದು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೀಚರ್ಸ್ ಈಗಾಗಲೇ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ.

ಹೌದು, ಶಿಯೋಮಿ ಸಂಸ್ಥೆ ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಕಳೆದ ಮಾರ್ಚ್‌ನಲ್ಲಿಯೇ ಜಾಗತಿಕವಾಗಿ ಅನಾವರಣಗೊಳಿಸಲಾಗಿದೆ. ಇದು 6.43-ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಹೋಲ್-ಪಂಚ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಸ್ಕ್ರೀನ್ ಟು ಬಾಡಿ 83.5% ಅನುಪಾತ ಹೊಂದಿರಲಿದ್ದು, ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ವಿಶೇಷತೆ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 12,499 ರೂ.ನಿಂದ ಆರಂಭವಾಗುವ ಸಾಧ್ಯತೆ ಇದೆ. ಈ ಫೋನ್ ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್ ಇದೇ ಮೇ 13 ರಂದು ಮಧ್ಯಾಹ್ನ 12 ಗಂಟೆಗೆ ಶಿಯೋಮಿ ಯೂಟ್ಯೂಬ್ ಮತ್ತು ಇತರ ಸೊಶೀಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳ ಮೂಲಕ ಲೈವ್ ಆಗಲಿದೆ.


Click it and Unblock the Notifications








