ಇಂದು ರೆಡ್ಮಿ ನೋಟ್ 10S ಫೋನಿನ ಫಸ್ಟ್‌ ಸೇಲ್‌: ಬೆಲೆ ಎಷ್ಟು?..ಫೀಚರ್ಸ್‌ ಏನು?

|

ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 4GB RAM + 64GB ಸ್ಟೋರೇಜ್‌ ವೇರಿಯಂಟ್ ಬೆಲೆಯು 14,999ರೂ.ಗಳು ಆಗಿದೆ.

ಸ್ಮಾರ್ಟ್‌ಫೋನ್

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮೇ 18) ನಡೆಯಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 64GB , 6GB RAM ಮತ್ತು 128GB ಆಗಿವೆ. ಡೀಪ್ ಸೀ ಬ್ಲೂ, ವೈಟ್ ಫಾರೆಸ್ಟ್, ಮತ್ತು ಶಾಡೋ ಬ್ಲ್ಯಾಕ್ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ ನೋಟ್ 10S ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌, ಸ್ಕ್ರೀನ್‌ ಟು ಬಾಡಿ 83.5% ಅನುಪಾತ ಹೊಂದಿರಲಿದ್ದು, ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 6GB + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 14,999 ರೂ. ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ದರದವು 15,999ರೂ.ಗಳಾಗಿದೆ. ಈ ಫೋನ್‌ ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಇಂದು (ಮೇ 18 ) ರಂದು ಸೇಲ್ ಆರಂಭಿಸಲಿದೆ.

Best Mobiles in India

English summary
Redmi Note 10S is backed by a 5,000mAh battery that supports 33W fast charging with a charger included in the box.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X