ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿದೆ. ಬಜೆಟ್ ಬೆಲೆಯಿಂದ ಹಿಡಿದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್ ಪರಿಚಯಿಸಿರುವ ಶಿಯೋಮಿ ಇದೀಗ ಹೊಸ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದರ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಬಿಡುಗಡೆ ಮಾಡಿದೆ.

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಹೊಸ ರೆಡ್ಮಿ ನೋಟ್ 10S ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸಿಕೊಂಡಿದೆ. ಇನ್ನು ಶಿಯೋಮಿ ಈಗಾಗಲೇ ಭಾರತದಲ್ಲಿ ರೆಡ್ಮಿ ನೋಟ್ 10 ಸರಣಿಯಲ್ಲಿ ರೆಡ್ಮಿ ನೋಟ್ 10, ರೆಡ್ಮಿ ನೋಟ್ 10 ಪ್ರೊ, ಮತ್ತು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಎಂಬ ಮೂರು ಮಾದರಿಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ಹೊಸ ಮಾದರಿಯನ್ನು ಪರಿಚಯಿಸಲಿದೆ. ಇನ್ನು ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆಯ ಮತ್ತು ಇತರೆ
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದೆ. ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಸ್ಕ್ರೀನ್ ಟು ಬಾಡಿ 83.5% ಅನುಪಾತ ಹೊಂದಿರಲಿದ್ದು, ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್, ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10ಎಸ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ ಭಾರತದಲ್ಲಿ 12,499 ರೂ.ನಿಂದ ಆರಂಭವಾಗುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದರ ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications