Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನಿನ ಹೊಸ ವೇರಿಯೆಂಟ್‌ ಬಿಡುಗಡೆ!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನಿನ ಹೊಸ 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G95 SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ ಈ ಫೋನ್‌ 5,000mAh ಬ್ಯಾಟರಿಯನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 10S

ಹೌದು, ಶಿಯೋಮಿ ಕಂಪೆನಿ ತನ್ನ ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನಿನ ಹೊಸ ವೇರಿಯೆಂಟ್‌ ಆಯ್ಕೆಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿತ್ತು. ಇದು 6GB RAM + 64GB ಸಂಗ್ರಹಣೆ ಮತ್ತು 6GB RAM + 128GB ವೇರಿಯೆಂಟ್‌ ಆಯ್ಕೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸಾಲಿಗೆ ಹೊಸ 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಸೇರಿಸಲಾಗಿದೆ. ಹಾಗಾದ್ರೆ ರೆಡ್ಮಿ ನೋಟ್‌10S ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ HD+ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನ್‌ ಆಕ್ಟಾಕೋರ್‌ ಮೀಡಿಯಾಟೆಕ್‌ ಹಿಲಿಯೋ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಅನ್ನು MIUI 12.5 ಜೊತೆಗೆ ಕಾರ್ಯನಿರ್ವಹಿಸಲಿದೆ. ಈ ಪ್ರೊಸೆಸರ್‌ ಅನ್ನು Mail-G76 MC4 GPU ನೊಂದಿಗೆ ಜೋಡಿಸಲಾಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 10S ಸ್ಮಾರ್ಟ್‌ಫೋನಿನ ಹೊಸ ವೇರಿಯೆಂಟ್‌ 8GB RAM + 128GB ಆಯ್ಕೆಯು 17,499.ರೂ ಬೆಲೆ ಹೊಂದಿದೆ. ಇದು Mi.com, Amazon India ಮತ್ತು Mi Homes ಸ್ಟೋರ್‌ನಲ್ಲಿ ಲಭ್ಯವಿರುತ್ತದೆ. ಈ ಫೋನ್‌ನ ಮೊದಲ ಮಾರಾಟವು ಡಿಸೆಂಬರ್ 3 ರಂದು ಮಧ್ಯಾಹ್ನ 12 ಕ್ಕೆ ನಡೆಯಲಿದೆ. ಲಾಂಚ್‌ ಆಫರ್‌ನಲ್ಲಿ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಮತ್ತು EMI ಜೊತೆಗೆ 1,000 ತ್ವರಿತ ರಿಯಾಯಿತಿ ನೀಡಲಿದೆ. ಇನ್ನು ರೆಡ್ಮಿ ನೋಟ್‌ 10S ಫೋನ್‌ನ 6GB + 64GB ಸ್ಟೋರೇಜ್ ರೂಪಾಂತರಕ್ಕಾಗಿ 14,999ರೂ. ಮತ್ತು 6GB + 128GB ಸ್ಟೋರೇಜ್ ಮಾದರಿಗೆ 15,999.ರೂ ಬೆಲೆ ಹೊಂದಿದೆ. ಇದು ಡೀಪ್ ಸೀ ಬ್ಲೂ, ಫ್ರಾಸ್ಟ್ ವೈಟ್ ಮತ್ತು ಶಾಡೋ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈಗಾಗಲೇ ಲಭ್ಯವಿದೆ.

Best Mobiles in India

English summary
Redmi Note 10S new variant 8GB RAM + 128GB storage option has now launched in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+