ಭಾರತದಲ್ಲಿ ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

|

ಜನಪ್ರಿಯ ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಡೇಟ್‌ ಫಿಕ್ಸ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಜುಲೈ 20 ಕ್ಕೆ ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರೆಡ್ಮಿ ನೋಟ್ 10T 5G

ಹೌದು, ಶಿಯೋಮಿ ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಜುಲೈ 20 ಕ್ಕೆ ಲಾಂಚ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಎನ್ಎಫ್‌ಸಿ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ ನೋಟ್ 10T 5G ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಇದು ಭಾರತದಲ್ಲಿ ಸರಿಸುಮಾರು 20,000 ರೂ.ಬೆಲೆಯನ್ನು ಹೊಂದಿರುವ ಸಾಧ್ಯತೆ ಇದೆ.

Best Mobiles in India

English summary
Xiaomi India Communications Head Kasturi Paladhi appeared in a video to announce the launch date of the Redmi Note 10T 5G in the country. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X