Home
ಸುದ್ದಿಜಾಲ

ಜಸ್ಟ್‌ 13,999ರೂ.ಗೆ ರೆಡ್ಮಿ ನೋಟ್ 10T 5G ಲಾಂಚ್!..ಫೀಚರ್ಸ್‌ ಹೇಗಿವೆ?

ಶಿಯೋಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಈ ಫೋನಿನ ಬೇಸ್‌ ವೇರಿಯಂಟ್‌ 13,999ರೂ. ಬೆಲೆಯ ಆರಂಭಿಕ ಪ್ರೈಸ್‌ಟ್ಯಾಗ್ ಅನ್ನು ಪಡೆದಿರುವುದು ಪ್ರಮುಖ ಆಕರ್ಷಣೆ ಅನಿಸಿದೆ.

ಲಾಂಚ್

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಕ್ರೋಮಿಯಮ್ ವೈಟ್, ಗ್ರಾಫೈಟ್ ಬ್ಲ್ಯಾಕ್, ಮೆಟಾಲಿಕ್ ಬ್ಲೂ ಮತ್ತು ಮಿಂಟ್ ಗ್ರೀನ್‌ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಎನ್ಎಫ್‌ಸಿ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. 4GB + 64GB ಸ್ಟೋರೇಜ್‌ನ ವೇರಿಯಂಟ್‌ ಬೆಲೆಯು 13,999ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಬೆಲೆಯು 15,999ರೂ. ಆಗಿದೆ. ಇದೇ ಜುಲೈ 26 ರಂದು ಅಮೆಜಾನ್, ಮಿ.ಕಾಮ್ ಸೇರಿದಂತೆ ಪ್ರಮುಖ ಆಫ್‌ಲೈನ್‌ ಸ್ಟೋರ್‌ಗಳಲ್ಲಿಯೂ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Redmi Note 10T 5G price in India has been set at Rs. 13,999 for the 4GB + 64GB storage variant.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+