Home
ಸುದ್ದಿಜಾಲ

ರೆಡ್ಮಿ ನೋಟ್‌ 11 ಈಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ!..ಆಫರ್‌ ತಿಳಿಯಿರಿ!

ಶಿಯೋಮಿ ಸಂಸ್ಥೆಯ ಜನಪ್ರಿಯ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಆದರೆ ಇದೀಗ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌ ಲಭ್ಯವಾಗಿದ್ದು, ಈ ಫೋನ್‌ ಖರೀದಿಸುವ ಗ್ರಾಹಕರಿಗೆ ಭರಪೂರ ಖುಷಿ ಎನಿಸಿದೆ.

ಹೌದು, ಜನಪ್ರಿಯ ಅಮೆಜಾನ್‌ ಪ್ಲಾಟ್‌ಫಾರ್ಮ್‌ ತಾಣದಲ್ಲಿ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್ (Redmi Note 11) 33% ರಿಯಾಯಿತಿ ಪಡೆದಿದ್ದು, 11,999ರೂ. ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ನಿಂದಲೂ ಕೊಡುಗೆ ಲಭ್ಯವಿದ್ದು, ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಸಹ ದೊರೆಯುತ್ತದೆ.

ರೆಡ್ಮಿ ನೋಟ್‌ 11 ಈಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ!..ಆಫರ್‌ ತಿಳಿಯಿರಿ!

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ Dimensity 810 ಚಿಪ್‌ಸೆಟ್‌ ಪ್ರೊಸೆಸರ್‌ ಪ್ರೊಸೆಸರ್‌ ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಹಾಗಾದರೇ ರೆಡ್ಮಿ ನೋಟ್‌ 11 ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ನೋಟ್ 11 ಡಿಸ್‌ಪ್ಲೇ ರಚನೆ : ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, AMOLED ಮಾದರಿಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಪಡೆದಿದ್ದು, ಅಧಿಕ ಬ್ರೈಟ್ನೆಸ್‌ ನಿಟ್ಸ್ ಹೊಂದಿದೆ.

ರೆಡ್ಮಿ ನೋಟ್‌ 11 ಈಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ!..ಆಫರ್‌ ತಿಳಿಯಿರಿ!

ರೆಡ್ಮಿ ನೋಟ್ 11 ಪ್ರೊಸೆಸರ್‌ ಪವರ್ : ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ Dimensity 810 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಓಎಸ್‌ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128 GB, 6GB + 128 GB ಮತ್ತು 8GB + 128 GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್ 5G ಸಪೋರ್ಟ್‌ ಪಡೆದಿದೆ.

ರೆಡ್ಮಿ ನೋಟ್ 11 ಕ್ಯಾಮೆರಾ ಸೆನ್ಸಾರ್ : ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 11 ಈಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ!..ಆಫರ್‌ ತಿಳಿಯಿರಿ!

ರೆಡ್ಮಿ ನೋಟ್ 11 ಬ್ಯಾಟರಿ ಮತ್ತು ಇತರೆ ಸೌಲಭ್ಯ : ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, IP53 ರೇಟೆಡ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ರೆಡ್ಮಿ ನೋಟ್ 11 ಮೆಮೊರಿ ಹಾಗೂ ಕಲರ್‌ ಆಯ್ಕೆ : ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 4GB RAM + 128 GB, 6GB + 128 GB ಮತ್ತು 8GB + 128 GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಪಡೆದಿದೆ. ಇನ್ನು ಈ ಫೋನ್‌ ಬ್ಲ್ಯಾಕ್‌, ಬ್ಲೂ ಹಾಗೂ ವೈಟ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Redmi Note 11 Price Cut On Amazon e-commerce site. Check offer and specifications. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+