ಇಂದು ರೆಡ್ಮಿ ನೋಟ್ 11 ಪ್ರೊ ಪ್ಲಸ್ ಫಸ್ಟ್ ಸೇಲ್!..ಏನಾದ್ರೂ ಆಫರ್ ಇದೆಯಾ?
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 11 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 6GB RAM + 128GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 20,999 ರೂ.ಗಳು ಆಗಿದೆ.

ರೆಡ್ಮಿ ನೋಟ್ 11 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮಾರ್ಚ್. 15) ನಡೆಯಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, 108 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಹಾಗೂ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 6GB RAM + 128GB, 8GB + 128GB ಮತ್ತು 8GB RAM + 256GB ಆಗಿವೆ. ಹಾಗಾದರೇ ರೆಡ್ಮಿ ನೋಟ್ 11 ಪ್ರೊ ಪ್ಲಸ್ 5G ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ರೆಡ್ಮಿ ನೋಟ್ 11 ಪ್ರೊ ಪ್ಲಸ್ 5G ಫೀಚರ್ಸ್
ರೆಡ್ಮಿ ನೋಟ್ 11 ಪ್ರೊ ಪ್ಲಸ್ 5G 6.67 ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕೂಡ 120Hz ರಿಫ್ರೆಶ್ ರೇಟ್ ಮತ್ತು 320Hz ಟಚ್ ಸ್ಯಾಂಪ್ಲಿಂಗ್ ಬೆಂಬಲದೊಂದಿಗೆ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ.

ಇದಲ್ಲದೆ 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಇನ್ನು ಈ ಫೋನ್ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಸ್ಟಿರಿಯೊ ಸ್ಪೀಕರ್ ಸೆಟಪ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, (ಹೈಬ್ರಿಡ್) ಮೈಕ್ರೋ-ಎಸ್‌ಡಿ ಕಾರ್ಡ್ ಸ್ಲಾಟ್, ಐಆರ್ ಬ್ಲಾಸ್ಟರ್ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದು IP53 ಸ್ಪ್ಲಾಶ್-ನಿರೋಧಕ ರೇಟಿಂಗ್ ಅನ್ನು ಸಹ ಹೊಂದಿದೆ. ಆಂಡ್ರಾಯ್ಡ್ 11 ಅನ್ನು ಆಧರಿಸಿದ MIUI 13 ಅನ್ನು ಹ್ಯಾಂಡ್‌ಸೆಟ್ ಬೂಟ್ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ ಪೋಲಾರ್ ವೈಟ್, ಗ್ರ್ಯಾಫೈಟ್ ಗ್ರೇ ಮತ್ತು ಅಟ್ಲಾಂಟಿಕ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ.
ಬೆಲೆ ಎಷ್ಟು, ಆಫರ್ ಏನು ಮತ್ತು ಲಭ್ಯತೆ?
ಭಾರತದಲ್ಲಿ ರೆಡ್ಮಿ ನೋಟ್ 11 ಪ್ರೊ ಪ್ಲಸ್ 5G ಫೋನ್ ಮೂರು ವೇರಿಯಂಟ್ ಆಯ್ಕೆ ಪಡೆದಿದೆ. 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 20,999ರೂ. ಆಗಿದೆ. 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 22,999ರೂ. ಆಗಿದೆ ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 24,999ರೂ. ಆಗಿದೆ. ಇನ್ನು ಈ ಫೋನ್ ಇಂದು ಅಮೆಜಾನ್ ತಾಣದ ಮೂಲಕ ಮೊದಲ ಮಾರಾಟ ಪ್ರಾರಂಭಿಸಲಿದೆ. ಹೆಚ್‌ಡಿಎಫ್ ಕ್ರೆಡಿಟ್ ಕಾರ್ಡ್ ನಲ್ಲಿ 1,000ರೂ. ರಿಯಾಯಿತಿ ಸಿಗಲಿದೆ. ಹಾಗೆಯೇ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಮಾಡಿದೆ.


Click it and Unblock the Notifications