Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ ನೋಟ್‌ 11 ಪ್ರೊ ಮತ್ತು ನೋಟ್‌ 11 ಪ್ರೊ + 5G ಬೆಲೆ ಬಹಿರಂಗ!

ರೆಡ್ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11 ಪ್ರೊ ಮತ್ತು ರೆಡ್ಮಿ ನೋಟ್‌ 11 ಪ್ರೊ + 5G ಯನ್ನು ಮಾರ್ಚ್ 9 ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಏನಿರಲಿದೆ ಅನ್ನೊದು ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ರೆಡ್ಮಿ ನೋಟ್‌ 11 ಪ್ರೊ ಮತ್ತು ರೆಡ್ಮಿ ನೋಟ್‌ 11 ಪ್ರೊ + 5G ಸ್ಮಾರ್ಟ್‌ಫೋನ್‌ ಬೆಲೆ ವಿವರ ಸೋರಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ ನೋಟ್‌ 11 ಪ್ರೊ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆದರೆ ರೆಡ್ಮಿ ನೋಟ್‌ 11 ಪ್ರೊ+ 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 1,200 ವರೆಗೆ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ರೆಡ್ಮಿ ನೋಟ್‌ 11 ಪ್ರೊ+ 5G ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಪ್ರೊ+ 5G ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಪ್ರೊ+ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು 67W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಗೆ 16,999ರೂ.ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 18,999ರೂ.ಆಗಿರಲಿದೆ. ಇದು ಫ್ಯಾಂಟಮ್ ವೈಟ್, ಸ್ಕೈ ಬ್ಲೂ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.
ಇನ್ನು ರೆಡ್ಮಿ ನೋಟ್‌ 11 ಪ್ರೊ+ 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆ 21,999ರೂ.ಬೆಲೆಗೆ ಬರುವ ನಿರೀಕ್ಷೆಯಿದೆ. ಇದರ ಟಾಪ್-ಆಫ್-ಲೈನ್ 8GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 23,999ರೂ. ಆಗಿದೆ.

Best Mobiles in India

English summary
Redmi Note 11 Pro, Redmi Note 11 Pro+ 5G India Pricing Leaked Ahead Of Launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+