Home
ಸುದ್ದಿಜಾಲ

ರೆಡ್ಮಿ ನೋಟ್‌ 11 ಪ್ರೊ+ ಮತ್ತು ನೋಟ್‌ 11 ಪ್ರೊ ಬಿಡುಗಡೆ! ವಿಶೇಷತೆ ಏನು?

ಭಾರತದ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಶಿಯೋಮಿಯ ರೆಡ್ಮಿ ಬ್ರ್ಯಾಂಡ್ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11 ಪ್ರೊ+ ಮತ್ತು ರೆಡ್ಮಿ ನೋಟ್‌ 11 ಪ್ರೊ ಎಂಬ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿವೆ.

ಶಿಯೋಮಿ

ಹೌದು, ಶಿಯೋಮಿ ರೆಡ್ಮಿ ಬ್ರ್ಯಾಂಡ್‌ ಭಾರತದಲ್ಲಿ ರೆಡ್ಮಿ ನೋಟ್‌ 11 ಪ್ರೊ+ ಮತ್ತು ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಇದರಲ್ಲಿ ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಆದರೆ ರೆಡ್ಮಿ ನೋಟ್‌ 11 ಪ್ರೊ+ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌11 ಪ್ರೊ

ರೆಡ್ಮಿ ನೋಟ್‌11 ಪ್ರೊ

ರೆಡ್ಮಿ ನೋಟ್‌11 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 320Hz ಟಚ್ ಸ್ಯಾಂಪ್ಲಿಂಗ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್‌ ಗ್ರ್ಯಾಫೈಟ್ ಗ್ರೇ, ಪೋಲಾರ್ ವೈಟ್ ಮತ್ತು ಸ್ಟಾರ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

ರೆಡ್ಮಿ ನೋಟ್‌11 ಪ್ರೊ+

ರೆಡ್ಮಿ ನೋಟ್‌11 ಪ್ರೊ+

ರೆಡ್ಮಿ ನೋಟ್‌11 ಪ್ರೊ+ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕೂಡ 120Hz ರಿಫ್ರೆಶ್ ರೇಟ್‌ ಮತ್ತು 320Hz ಟಚ್ ಸ್ಯಾಂಪ್ಲಿಂಗ್ ಬೆಂಬಲದೊಂದಿಗೆ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಪೋಲಾರ್ ವೈಟ್, ಗ್ರ್ಯಾಫೈಟ್ ಗ್ರೇ ಮತ್ತು ಅಟ್ಲಾಂಟಿಕ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ ನೋಟ್‌ 11 ಪ್ರೊ+ ಸ್ಮಾರ್ಟ್‌ಫೋನ್‌ 6GB RAM + 128GB ಆವೃತ್ತಿಗೆ 20,999ರೂ.ಬೆಲೆಯನ್ನು ಹೊಂದಿದೆ. ಆದರೆ 8GB RAM + 128GB ಆವೃತ್ತಿಯ ಬೆಲೆ 22,999 ರೂ.ಆಗಿದೆ. ಇನ್ನು ಟಾಪ್ ಎಂಡ್ 8GB RAM+256GB ಆವೃತ್ತಿಯ ಬೆಲೆ 24,999 ರೂ.ಬೆಲೆಯಲ್ಲಿ ಬರಲಿದೆ. ಇನ್ನು ರೆಡ್ಮಿ ನೋಟ್‌11 ಪ್ರೊ ಸ್ಮಾರ್ಟ್‌ಫೋನ್‌ 6GB RAM + 128GB ಆವೃತ್ತಿಗೆ 17,999ರೂ.ಬೆಲೆಯಿಂದ ಪ್ರಾರಂಭವಾಗಲಿದೆ. ಆದರೆ 8GB RAM + 128GB ಆವೃತ್ತಿಯ ಬೆಲೆ 19,999ರೂ.ಆಗಿದೆ.

Best Mobiles in India

English summary
Redmi Note 11 Pro, Redmi Note 11 Pro + have launched in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+