Home
ಸುದ್ದಿಜಾಲ

Redmi: 108MP ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ ಭರ್ಜರಿ ಆಫರ್! 5000 mAh ಬ್ಯಾಟರಿ..

ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಉತ್ತಮ ಕ್ಯಾಮೆರಾ ಫೋನ್‌ ಬ್ರ್ಯಾಂಡ್‌ ಎನಿಸಿಕೊಂಡಿರುವ ರೆಡ್ಮಿ (Redmi) ವಿವಿಧ ಫೀಚರ್ಸ್‌ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಸೌಂಡ್‌ ಮಾಡುತ್ತಾ ಬರುತ್ತಿದೆ. ಈ ಬೆಳವಣಿಗೆ ನಡುವೆ ಉತ್ತಮ ಕ್ಯಾಮೆರಾ ಫೀಚರ್ಸ್‌ ಆಯ್ಕೆ ಪಡೆದಿರುವ ಫೋನ್‌ ಪ್ರಮುಖ ಇ- ಕಾಮರ್ಸ್‌ ಸೈಟ್‌ನಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯ ಇದೆ.

ಹೌದು, ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ (Redmi Note 11 Pro smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಫೋನ್ 108 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ ಹಾಗೂ 8 GB RAM ಆಯ್ಕೆ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಭಾರತದಲ್ಲಿ ಇದರ ಬೆಲೆ ಎಷ್ಟು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

108MP ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ ಭರ್ಜರಿ ಆಫರ್! 5000 mAh ಬ್ಯಾಟರಿ..

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 24,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವಿಗ ಇದನ್ನು ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ 16,929 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಫ್ಲಿಪ್‌ಕಾರ್ಟ್‌(Flipkart) ಈ ಫೋನ್‌ಗೆ ಈ ಮೊದಲು ನೀಡಿದ್ದ ಆಫರ್‌ಗಿಂತ ಹೆಚ್ಚಿನ ಆಫರ್ ಅನ್ನು ನೀಡಿದೆ. ಅಂದರೆ ಈಗ 32% ರಿಯಾಯಿತಿಯೊಂದಿಗೆ ಇದನ್ನು ಖರೀದಿ ಮಾಡಬಹುದಾಗಿದೆ.

ಇತರೆ ಕೊಡುಗೆ ಮೂಲಕವೂ ಕಡಿಮೆ ಬೆಲೆಗೆ ಈ ಫೋನ್‌ ಖರೀದಿ ಮಾಡಬಹುದಾಗಿದೆ. ಅಂದರೆ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಹಿವಾಟುಗಳ ಮೇಲೆ 10% ರಿಯಾಯಿತಿ, ಸಿಟಿ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ ಹಾಗೂ 12,500ರೂ.ಗಳು ಮತ್ತು ಅದಕ್ಕಿಂತ ಹೆಚ್ಚಿನ ಆರ್ಡರ್‌ಗಳ ಮೇಲೆ ಒನ್‌ಕಾರ್ಡ್‌ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 750 ರೂ.ಗಳ ಆಫರ್ ಪಡೆಯಬಹುದಾಗಿದೆ.

108MP ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ ಭರ್ಜರಿ ಆಫರ್! 5000 mAh ಬ್ಯಾಟರಿ..

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.67 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 120Hz ರಿಫ್ರೆಶ್‌ ರೇಟ್‌, 1200 nits ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಮತ್ತು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಈ ಫೋನ್‌ ಕಾಣಿಸಿಕೊಂಡಿದ್ದು, 86.0% ಸ್ಕ್ರೀನ್-ಟು-ಬಾಡಿ ಅನುಪಾತ, 395 ಪಿಪಿಐ ಸಾಂದ್ರತೆಯೊಂದಿಗೆ ಉತ್ತಮ ಎನಿಸಿದೆ.

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಮೀಡಿಯಾಟೆಕ್ MT6781 ಹಿಲಿಯೊ G96 (12 nm) ಪ್ರೊಸೆಸರ್‌ ಬಲ ಪಡೆದಿದ್ದು, ಆಂಡ್ರಾಯ್ಡ್ 11, ಎಂಐಯುಐ 13 ಓಎಸ್‌ ಅನ್ನು ರನ್‌ ಮಾಡಲಿದೆ. ಇದರೊಂದಿಗೆ ಮಾಲಿ-G57 MC2 ಗ್ರಾಫಿಕ್ಸ್‌ ಕಾರ್ಡ್‌ನೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದೆ. ಜೊತೆಗೆ ಆಫರ್ ಬೆಲೆಗೆ ಲಭ್ಯ ಇರುವ ಈ ಫೋನ್ 8GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಬೆಂಬಲ ಪಡೆದಿದೆ. ಇದರೊಂದಿಗೆ ಸ್ಟೋರೇಜ್‌ ವಿಸ್ತರಣೆಗೆ ಎಸ್‌ಡಿ ಕಾರ್ಡ್‌ ಸೌಲಭ್ಯ ಇದೆ.

108MP ಕ್ಯಾಮೆರಾ ಆಯ್ಕೆಯ ಈ ಫೋನ್‌ಗೆ ಭರ್ಜರಿ ಆಫರ್! 5000 mAh ಬ್ಯಾಟರಿ..

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 108 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ, 2 ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಇನ್ನು ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 67W ವೈರ್ಡ್ ಚಾರ್ಜಿಂಗ್‌ ಬೆಂಬಲ ಪಡೆದಿದೆ. ಈ ಮೂಲಕ 15 ನಿಮಿಷಗಳಲ್ಲಿ 51% ಚಾರ್ಜಿಂಗ್ ಆಗಲಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್‌, ವೈ-ಫೈ 802.11 b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.1, A2DP, LE, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್‌ ಪಡೆದಿದೆ.

Best Mobiles in India

English summary
Redmi Note 11 Pro smartphone is now available at an offer price. This phone will perform well with a 108 megapixel main camera and 8 GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+