ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್!
ರೆಡ್ಮಿ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ ಸರಣಿಯ ನೋಟ್ 11 ಪ್ರೊ ಮಾಡೆಲ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 9ರಂದು ಲಾಂಚ್ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸರಣಿಯಲ್ಲಿ ರೆಡ್ಮಿ ನೋಟ್ 11 ಪ್ರೊ ಮತ್ತು ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್‌ಫೋನ್‌ಗಳು ಬರಲಿವೆ ಎನ್ನಲಾಗಿದೆ.

ಹೌದು, ರೆಡ್ಮಿ ಕಂಪೆನಿ ಶೀಘ್ರದಲ್ಲೇ ಭಾರತದಲ್ಲಿ ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್ 11 ಪ್ರೊ ಮತ್ತು ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಿದೆ. ಇದರಲ್ಲಿ ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗಾದ್ರೆ ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ ನೋಟ್ 11ಪ್ರೊ ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಒಳಗೊಂಡಿದೆ. ಈ ಡಿಸ್‌ಪ್ಲೇ 86.01 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು
ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ ಈ ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ರೆಡ್ಮಿ ನೋಟ್ 11ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 11ಪ್ರೊ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆಯಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಗೈರೋಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 16,499ರೂ.ಗಳಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್ ಮಾರ್ಚ್ 9ರಂದು ಲಾಂಚ್ ಆಗಲಿದೆ. ಇದು ಯಾವೆಲ್ಲಾ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


Click it and Unblock the Notifications








