Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ ನೋಟ್‌ 11 ಮತ್ತು ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ ಬಿಡುಗಡೆ!

ರೆಡ್ಮಿ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿವೆ. ಶಿಯೋಮಿ ರೆಡ್ಮಿ ಬ್ರಾಂಡ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11 ಮತ್ತು ರೆಡ್ಮಿ ನೋಟ್‌ 11S ಅನ್ನು ಲಾಂಚ್‌ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 90Hz ರಿಫ್ರೆಶ್‌ ರೇಟ್‌ ಬಲಪಡೆದಿರುವ ಅಮೋಲೆಡ್‌ ಡಿಸ್‌ಪ್ಲೇ ಹೊಂದಿವೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ರೆಡ್ಮಿ ಕಂಪೆನಿ ಭಾರತದಲ್ಲಿ ರೆಡ್ಮಿ ನೋಟ್‌ 11 ಮತ್ತು ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿವೆ. ಹಾಗೆಯೇ ಈ ಫೋನ್‌ಗಳು IP53-ರೇಟೆಡ್ ಸ್ಪ್ಲಾಶ್-ನಿರೋಧಕ ನಿರ್ಮಾಣವನ್ನು ಸಹ ಹೊಂದಿವೆ. ಆದರೆ ಈ ಎರಡು ಫೋನ್‌ಗಳು ವಿಭಿನ್ನ ಮಾದರಿಯ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಅಮೋಲೆಡ್‌ ಡಾಟ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, MIUI 13 ನೊಂದಿಗೆ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್‌ ಕ್ವಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ ಕೂಡ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಅಮೋಲೆಡ್‌ ಡಾಟ್ ಡಿಸ್‌ಪ್ಲೇ ಆಗಿದೆ. ಇದು ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ MIUI 13 ನೊಂದಿಗೆ ಆಂಡ್ರಾಯ್ಡ್‌ 11 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM2 ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದು 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌ ಬೆಲೆ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,499ರೂ ಹೊಂದಿದೆ. ಇನ್ನು 6GB + 64GB ಆಯ್ಕೆಯ ಬೆಲೆ 14,499ರೂ.ಆಗಿದೆ. ಹಾಗೂ 6GB + 128GB ಮಾದರಿಯ ಆಯ್ಕೆಗೆ 15,999ರೂ ಬೆಲೆ ಹೊಂದಿದೆ. ಇದು ಹರೈಸನ್ ಬ್ಲೂ, ಸ್ಪೇಸ್ ಬ್ಲ್ಯಾಕ್ ಮತ್ತು ಸ್ಟಾರ್‌ಬರ್ಸ್ಟ್ ವೈಟ್ ಬಣ್ಣಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಫೆಬ್ರವರಿ 11 ರಿಂದ ಮಾರಾಟವಾಗಲಿದೆ.
ಇನ್ನು ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ 6GB + 64GB ಮಾದರಿಗೆ 16,499.ರೂ ಬೆಲೆ ಹೊಂದಿದೆ. ಇದರ 6GB + 128GB ಮಾದರಿ ಆಯ್ಕೆಗೆ 17,499ರೂ.ಬೆಲೆ ಪಡೆದುಕೊಂಡಿದೆ. ಹಾಗೆಯೇ ಟಾಪ್-ಆಫ್-ಲೈನ್ 8GB + 128GB ಆಯ್ಕೆಯ ಬೆಲೆ 18,499ರೂ ಆಗಿದೆ. ಇದು ಹಾರಿಜಾನ್ ಬ್ಲೂ, ಪೋಲಾರ್ ವೈಟ್ ಮತ್ತು ಸ್ಪೇಸ್ ಬ್ಲ್ಯಾಕ್ ಶೇಡ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಫೆಬ್ರವರಿ 21 ರಿಂದ ಖರೀದಿಗೆ ಲಭ್ಯವಿರುತ್ತದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಅಮೆಜಾನ್‌, ಮಿ.ಕಾಮ್‌, ಮಿ ಹೋಮ್ ಸ್ಟೋರ್‌ಗಳು, ಮಿ ಸ್ಟುಡಿಯೋಸ್ ಮೂಲಕ ಖರೀದಿಸಬಹುದಾಗಿದೆ.

ಲಾಂಚ್‌ ಆಫರ್‌

ಲಾಂಚ್‌ ಆಫರ್‌

ರೆಡ್ಮಿ ನೋಟ್‌11 ಮತ್ತು ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಫರ್‌ ಅನ್ನು ಪಡೆದುಕೊಂಡಿವೆ. ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 1,000 ತ್ವರಿತ ರಿಯಾಯಿತಿ ಲಭ್ಯವಾಗಲಿದೆ. ಇದಲ್ಲದೆ ವಿವಿಧ ರಿಟೇಲ್‌ ಸ್ಟೋರ್‌ಗಳ ಮೂಲಕ ನೋ ಕಾಸ್ಟ್‌ EMI ಆಯ್ಕೆಗಳು ಮತ್ತು ಎಕ್ಸ್‌ಚೇಂಜ್‌ ಆಫರ್‌ ಅನ್ನು ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Redmi Note 11, Redmi Note 11S With Quad Rear Cameras Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+