ಹೊಸ ರೆಡ್ಮಿ ಫೋನ್ ಖರೀದಿಸಲು ತಡ ಮಾಡಬೇಡಿ!..ಈ ಆಫರ್ ಕಳ್ಕೋಬೇಡಿ!
ಶಿಯೋಮಿ ಕಂಪನಿಯ ಜನಪ್ರಿಯ ಫೋನ್‌ಗಳಲ್ಲಿ ಇಂದಾದ ರೆಡ್ಮಿ ನೋಟ್ 11 SE ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ರೆಡ್ಮಿ ನೋಟ್ 11SE ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿದ್ದು, ಈ ಫೋನ್ ಮತ್ತೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ.

ಹೌದು, ಶಿಯೋಮಿ ಕಂಪನಿಯ ರೆಡ್ಮಿ ನೋಟ್ 11 SE ಫೋನ್ ಬೆಲೆಯಲ್ಲಿ 500ರೂ. ಇಳಿಕೆ ಆಗಿದೆ. ಇನ್ನು ಈ ಫೋನ್ 6GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿದ್ದು, ಬಿಫ್ರಾಸ್ಟ್ ಬ್ಲೂ, ಕಾಸ್ಮಿಕ್ ವೈಟ್, ಸ್ಪೇಸ್ ಬ್ಲ್ಯಾಕ್ ಮತ್ತು ಥಂಡರ್ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ರೆಡ್ಮಿ ನೋಟ್ 11 SE ಫೋನ್ 6GB RAM + 64GB ವೇರಿಯಂಟ್ 13,499ರೂ. ಪ್ರೈಸ್‌ಟ್ಯಾಗ್ ಹೊಂದಿದ್ದು, ಬೆಲೆ ಇಳಿಕೆ ಬಳಿಕ ಈ ಫೋನ್ 12,999ರೂ. ಬೆಲೆಗೆ ಖರೀದಿಗೆ ಲಭ್ಯವಾಗಲಿದೆ. ಇದಲ್ಲದೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಲಭ್ಯವಾಗಲಿದೆ. ಹಾಗಾದರೆ ರೆಡ್ಮಿ ನೋಟ್ 11 SE ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 11 SE ಸ್ಮಾರ್ಟ್‌ಫೋನ್ 6.43 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ ಬ್ರೈಟ್ನೆಸ್ 1,100 nits ಆಗಿದೆ.

ಪ್ರೊಸೆಸರ್ ಪವರ್ ಯಾವುದು?
ರೆಡ್ಮಿ ನೋಟ್ 11 SE ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 64GB ಆಂತರೀಕ ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ.

ಕ್ಯಾಮೆರಾ ಸೆನ್ಸಾರ್ ವಿಶೇಷ
ರೆಡ್ಮಿ ನೋಟ್ 11 SE ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿವೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಎರಡೂ ಕ್ಯಾಮೆರಾ ಸೆಟಪ್‌ಗಳು 30 fps ನಲ್ಲಿ 4K ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರೆಡ್ಮಿ ನೋಟ್ 11 SE ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸ್ಪೀಕರ್ ಸೆಟಪ್, 3.5mm ಹೆಡ್‌ಫೋನ್ ಜ್ಯಾಕ್, USB ಟೈಪ್-C ಪೋರ್ಟ್, ಸೈಡ್-ಮೌಂಟರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್ ಅನ್ನು ಒಳಗೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಸ್ಮಾರ್ಟ್‌ಫೋನ್ IP53 ಎಂದು ರೇಟ್ ಮಾಡಲಾಗಿದೆ.

ಫೋನಿನ ಬೆಲೆ ಎಷ್ಟು ಮತ್ತು ಲಭ್ಯತೆ
ರೆಡ್ಮಿ ನೋಟ್ 11 SE ಸ್ಮಾರ್ಟ್‌ಫೋನ್ 6GB RAM ಮತ್ತು 64GB ಸಾಮರ್ಥ್ಯದ ಸಿಂಗಲ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಬ್ಲೂ, ಕಾಸ್ಮಿಕ್ ವೈಟ್, ಸ್ಪೇಸ್ ಬ್ಲ್ಯಾಕ್ ಮತ್ತು ಥಂಡರ್ ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








