Home
ಸುದ್ದಿಜಾಲ

ರೆಡ್ಮಿಯ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!..ಆಫರ್‌ ಬೆಲೆಗೆ ಗ್ರಾಹಕರು ಅಚ್ಚರಿ!

ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಕೊಡುಗೆ ಲಭ್ಯ ಇರುತ್ತದೆ. ಈ ನಿಟ್ಟಿನಲ್ಲಿ ಅನೇಕರು ಅಮೆಜಾನ್‌ ತಾನದತ್ತ ಕಣ್ಣಾಡಿಸುತ್ತಾರೆ. ಇದೀಗ ರೆಡ್ಮಿ ನೋಟ್‌ 11 SE ಸ್ಮಾರ್ಟ್‌ಫೋನ್‌ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಮಾಡಿದೆ.

ಹೌದು, ಅಮೆಜಾನ್‌ ವೆಬ್‌ಸೈಟ್‌ ನಲ್ಲಿ ರೆಡ್ಮಿ ನೋಟ್‌ 11 SE ಮೊಬೈಲ್‌ ಶೇ. 21% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 6 GB RAM + 64 GB ಸ್ಟೋರೇಜ್‌ ವೇರಿಯಂಟ್‌ 13,499ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಇದಲ್ಲದೇ ಅಮೆಜಾನ್‌ ತಾಣದಲ್ಲಿ ಲಭ್ಯ ಇರುವ ಇತರೆ ಕೆಲವು ಆಫರ್‌ಗಳನ್ನು ಸೇರಿದರೆ, ಮತ್ತಷ್ಟು ರಿಯಾತಿಯಿ ಪಡೆಯುವ ಅವಕಾಶ ಸಹ ಇದೆ.

ರೆಡ್ಮಿಯ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!..ಆಫರ್‌ ಬೆಲೆಗೆ ಗ್ರಾಹಕರು ಅಚ್ಚರಿ!

ಅಂದಹಾಗೆ ರೆಡ್ಮಿ ನೋಟ್‌ 11 SE ಮೊಬೈಲ್‌ ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡುತ್ತದೆ. ಹಾಗೆಯೇ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಕೂಡಾ ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇನ್ನುಳಿದಂತೆ ರೆಡ್ಮಿ ನೋಟ್‌ 11 SE ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿಯ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!..ಆಫರ್‌ ಬೆಲೆಗೆ ಗ್ರಾಹಕರು ಅಚ್ಚರಿ!

ಡಿಸ್‌ಪ್ಲೇ ಡಿಸೈನ್‌ ಹಾಗೂ ರಚನೆಯ ಮಾಹಿತಿ

ರೆಡ್ಮಿ ನೋಟ್‌ 11 SE ಸ್ಮಾರ್ಟ್‌ಫೋನ್‌ 6.43 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 409ppi ಆಗಿದೆ. ಹಾಗೆಯೇ ಬ್ರೈಟ್ನೆಸ್‌ 1,100 nits ಸೌಲಭ್ಯ ಪಡೆದಿದೆ.

ರೆಡ್ಮಿಯ ಈ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!..ಆಫರ್‌ ಬೆಲೆಗೆ ಗ್ರಾಹಕರು ಅಚ್ಚರಿ!

ಯಾವ ಪ್ರೊಸೆಸರ್‌ ಪವರ್‌

ರೆಡ್ಮಿ ನೋಟ್‌ 11 SE ಮೊಬೈಲ್‌ ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಓಎಸ್‌ ನಲ್ಲಿ ಕೆಲಸ ಮಾಡುತ್ತದೆ. ಇದಲ್ಲದೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಆಂತರೀಕ ಸ್ಟೋರೇಜ್‌ನ ಸಿಂಗಲ್‌ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ರೆಡ್ಮಿ ನೋಟ್‌ 11 SE ಮೊಬೈಲ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ.

ಅದೇ ರೀತಿ ಮೂರನೇ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿವೆ. ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಎರಡೂ ಕ್ಯಾಮೆರಾ ರಚನೆಗಳು 30 fps ನಲ್ಲಿ 4K ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಪಡೆದಿವೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ರೆಡ್ಮಿ ನೋಟ್‌ 11 SE ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಸ್ಪೀಕರ್ ಸೆಟಪ್, 3.5mm ಹೆಡ್‌ಫೋನ್ ಜ್ಯಾಕ್, USB ಟೈಪ್-C ಪೋರ್ಟ್, ಸೈಡ್-ಮೌಂಟರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್ ಅನ್ನು ಒಳಗೊಂಡಿದೆ.

Best Mobiles in India

English summary
Redmi Note 11 SE receive a price cut on amazon. more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+