Home
ಸುದ್ದಿಜಾಲ

ರೆಡ್ಮಿ ನೋಟ್ 11 ಸರಣಿ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಒಳಗೊಂಡಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಶಿಯೋಮಿ ಸದ್ಯದಲ್ಲೆ ರೆಡ್ಮಿ ಬ್ರಾಂಡ್‌ನಡಿಯಲ್ಲಿ ರೆಡ್ಮಿ ನೋಟ್‌ 11 ಸರಣಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ರೆಡ್ಮಿ ನೋಟ್ 11 ಸರಣಿ ಇದೇ ಅಕ್ಟೋಬರ್ 28 ರಂದು ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಇನ್ನು ಈ ಸರಣಿಯು ರೆಡ್ಮಿ ನೋಟ್ 11, ರೆಡ್ಮಿ ನೋಟ್ 11 ಪ್ರೊ, ರೆಡ್ಮಿ ನೋಟ್ 11 ಪ್ರೊ ಪ್ಲಸ್ ಸ್ಮಾರ್ಟ್‌ ಫೋನ್ ಗಳನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ.

ಶಿಯೋಮಿ

ಹೌದು, ಶಿಯೋಮಿ ಕಂಪೆನಿ ರೆಡ್ಮಿ ಬ್ರಾಂಡ್‌ನಲ್ಲಿ ರೆಡ್ಮಿ ನೋಟ್ 11 ಸರಣಿಯನ್ನು ಬಿಡುಗಡೆ ಮಾಡಲು ದಿನಾಂಕ ಗೊತ್ತು ಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸರಣಿಯ ಫೀಚರ್ಸ್‌ ಹೇಗಿರಲಿದೆ ಅನ್ನೊದು ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳು 120Hz ಡಿಸ್‌ಪ್ಲೇ ಮತ್ತು 5,000mAh ಬ್ಯಾಟರಿಯನ್ನು ಹೊಂದಿರುತ್ತವೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಮೀಡಿಯಾ ಟೆಕ್ ಡೈಮೆನ್ಸಿಟಿ SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌:ಫೋನ್‌ ಸರಣಿಯ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 11 ವಿಶೇಷ

ರೆಡ್ಮಿ ನೋಟ್ 11 ವಿಶೇಷ

ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ 8GB RAM ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 11 ಪ್ರೊ ವಿಶೇಷ

ರೆಡ್ಮಿ ನೋಟ್ 11 ಪ್ರೊ ವಿಶೇಷ

ರೆಡ್ಮಿ ನೋಟ್ 11 ಪ್ರೊ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿರಲಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 8GB RAM ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ HM2 ಪ್ರೈಮರಿ ಸೆನ್ಸರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 11 ಪ್ರೊ ಪ್ಲಸ್‌

ರೆಡ್ಮಿ ನೋಟ್ 11 ಪ್ರೊ ಪ್ಲಸ್‌

ರೆಡ್ಮಿ ನೋಟ್ 11 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ವಿಶೇಷತೆ ಹೆಚ್ಚು ಕಡಿಮೆ ರೆಡ್ಮಿ ನೋಟ್‌11 ಪ್ರೊ ಮಾದರಿಯಲ್ಲಿಯೇ ಇರಲಿದೆ. ಆದರೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್ ಬಲವನ್ನು ಪಡೆದುಕೊಳ್ಳಬಹುದು ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಸಿಎನ್‌ವೈ 1,199 (ಅಂದಾಜು 14,050ರೂ.) ಬೆಲೆ ಹೊಂದಿದೆ. ಇನ್ನು ಈ ಫೋನ್‌ 6 GB RAM + 128 GB ಸ್ಟೋರೇಜ್ ರೂಪಾಂತರದ ಬೆಲೆ CNY 1,399 (ಸುಮಾರು ರೂ 16,300) ಆಗಿರುತ್ತದೆ.
ಇನ್ನು ರೆಡ್ಮಿ ನೋಟ್ 11 ಪ್ರೊ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ ಸಿಎನ್‌ವೈ 1,599 (ಅಂದಾಜು 18,700ರೂ).ಬೆಲೆ ಹೊಂದಿದೆ. 8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ CNY 1,999 (ಅಂದಾಜು 18,700ರೂ) ಬೆಲೆ ಹೊಂದಿದೆ. ಇನ್ನು ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ 8 GB RAM + 128 GB ಸ್ಟೋರೇಜ್ ರೂಪಾಂತರವು CNY 2,199 (ಅಂದಾಜು ರೂ 25,713) ಬೆಲೆ ಹೊಂದಿದೆ. ಹಾಗೆಯೇ 8GB RAM + 256 GB ಸ್ಟೋರೇಜ್ ರೂಪಾಂತರದ ಬೆಲೆ CNY 2,499 (ಅಂದಾಜು ರೂ 29,221) ಆಗಿರುತ್ತದೆ.

Best Mobiles in India

English summary
redmi Note 11 series will include the Redmi Note 11, Note 11 Pro, and Note 11 Pro+.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+